Breaking News
Home / ರಾಜಕೀಯ / ರಾತ್ರೋರಾತ್ರಿ 200 ದಾಳಿಂಬೆ ಗಿಡ ಕತ್ತರಿಸಿದ ಕಿಡಿಗೇಡಿಗಳು, ರೈತನಿಗೆ ಆಘಾತ

ರಾತ್ರೋರಾತ್ರಿ 200 ದಾಳಿಂಬೆ ಗಿಡ ಕತ್ತರಿಸಿದ ಕಿಡಿಗೇಡಿಗಳು, ರೈತನಿಗೆ ಆಘಾತ

Spread the love

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) : ರೈತರಿಗೆ ಅತಿವೃಷ್ಟಿ, ಅನಾವೃಷ್ಟಿ ಕಾಡುತ್ತಲೇ ಇರುತ್ತವೆ.

ಈ ಮಧ್ಯೆ ಕೆಲವರು ಹೇಗಾದರೂ ಮಾಡಿ ಅಲ್ಪ ಸ್ವಲ್ಪ ಬೆಳೆಯನ್ನಾದರೂ ಉಳಿಸಿಕೊಂಡು ಜೀವನ ಬಂಡಿ ಸಾಗಿಸುತ್ತಾರೆ. ಈ ಬಾರಿಯಂತೂ ಬರಗಾಲದ ಹೊಡೆತಕ್ಕೆ ಅನ್ನದಾತರು ನಲುಗಿದ್ದಾರೆ. ಈ ನಡುವೆ ಕಳೆದ ಒಂದು ವರ್ಷದಿಂದ ಕಷ್ಟಪಟ್ಟು ದಾಳಿಂಬೆ ಬೆಳೆಯನ್ನು ಉಳಿಸಿಕೊಂಡಿದ್ದ ರೈತನಿಗೆ ಒಂದೇ ದಿನದಲ್ಲಿ ಆಘಾತ ಉಂಟಾಗಿದೆ. ಇದಕ್ಕೆ ಕಾರಣ ಹುಲುಸಾಗಿ ಬೆಳೆದಿದ್ದ ದಾಳಿಂಬೆ ಗಿಡಗಳನ್ನು ಯಾರೋ ಕಡಿದು ಹಾಕಿರುವುದು.

ಹೌದು, ಆ ರೈತನಿಗೆ ಇರೋದು ಅಲ್ಪ ಸ್ವಲ್ಪ ಜಮೀನು. ಕೃಷಿಯನ್ನೇ ಕಾಯಕವಾಗಿಸಿಕೊಂಡಿರುವ ಆತ, ದಾಳಿಂಬೆ ಬೆಳೆಯಲ್ಲಿ ಸಾಧನೆ ಮಾಡಬೇಕೆಂಬ ಹಂಬಲದಿಂದ ಅಕ್ಕಪಕ್ಕದ ಜಮೀನನ್ನು ಲೀಸ್​ಗೆ ತೆಗೆದುಕೊಂಡು ಸೋಂಪಾಗಿ ದಾಳಿಂಬೆ ಗಿಡಗಳನ್ನು ಬೆಳೆದಿದ್ದ. ಆದ್ರೆ ಯಾರೋ ಕಿಡಿಗೇಡಿಗಳು ಗಿಡಗಳನ್ನು ಕಟಾವು ಮಾಡಿ ವಿಕೃತಿ ಮೆರೆದಿದ್ದಾರೆ. ಈ ದುಷ್ಕೃತ್ಯ ಕಂಡು ಅನ್ನದಾತನಿಗೆ ಆಕಾಶವೇ ಕಳಚಿ ತಲೆಮೇಲೆ ಬಿದ್ದಂತಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹ್ಯಾಡಾಳ ಗ್ರಾಮದ ವೆಂಕಟೇಗೌಡ ಎಂಬುವರಿಗೆ ಇರೋದು 11 ಗುಂಟೆ ಜಮೀನು ಮಾತ್ರ. ಆದ್ರೆ, ಕೃಷಿ ಮಾಡಿ ಅದರಿಂದಲೇ ಮೇಲೆ ಬರಬೇಕು ಎಂಬ ಛಲದಿಂದ ತನ್ನ ಜಮೀನಿನ ಪಕ್ಕದ ಬೇರೆಯವರ ಭೂಮಿಯನ್ನು ಲೀಸ್​ಗೆ ತೆಗೆದುಕೊಂಡು ಸುಮಾರು ಒಂದು ಎಕರೆ ಪ್ರದೇಶಕ್ಕೆ ದಾಳಿಂಬೆ ಬೆಳೆ ಬೆಳೆದಿದ್ದರು. ಸೋಂಪಾಗಿ ಬೆಳೆದಿದ್ದ ದಾಳಿಂಬೆ ಮೇಲೆ ಕಿಡಿಗೇಡಿಗಳ ಕಣ್ಣು ಬಿದ್ದಿದ್ದು, ರಾತ್ರೋರಾತ್ರಿ ತೋಟಕ್ಕೆ ನುಗ್ಗಿ, ಗಿಡಗಳನ್ನು ಬುಡಸಹಿತ ಕತ್ತರಿಸಿ ಹಾಕಿದ್ದಾರೆ.

ಅಂದಹಾಗೆ, ಒಂದು ಎಕರೆ ಭೂಮಿಯಲ್ಲಿ ಸುಮಾರು 400 ದಾಳಿಂಬೆ ಗಿಡಗಳನ್ನು ಬೆಳೆಯಲಾಗಿತ್ತು. ಈ ಗಿಡಗಳು ಒಂದು ವರ್ಷ 2 ತಿಂಗಳು ಪೂರೈಸಿದ್ದು, ಇನ್ನು 9 ತಿಂಗಳು ಕಳೆದಿದ್ದರೆ ಒಳ್ಳೆಯ ಫಸಲು ಸಿಗುತ್ತಿತ್ತು. ಬೆಳೆ ರೈತನ ಕೈ ಸೇರುವ ಮೊದಲೇ ಕಿಡಿಗೇಡಿಗಳು 200 ಗಿಡಗಳನ್ನು ಕಟ್ ಮಾಡಿದ್ದಾರೆ. ಇದರಿಂದ ಬೆಳೆಗಾರನಿಗೆ ಸುಮಾರು ಐದರಿಂದ 6 ಲಕ್ಷ ರೂಪಾಯಿ ನಷ್ಟವಾಗಿದೆ.


Spread the love

About Laxminews 24x7

Check Also

ಸುವರ್ಣಸೌಧದ ಹಾಲ್‌ನಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಮನವಿ

Spread the loveಬೆಳಗಾವಿ: ಸಾವರ್ಕರ್ ಫೋಟೋ ತೆರವಿನ ಕೂಗಿನ‌ ಮಧ್ಯೆ ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಸುವರ್ಣಸೌಧ ಸಭಾಭವನದಲ್ಲಿ ಗಣ್ಯರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ