Breaking News

ಮತ್ತೆ ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು

Spread the love

ಚಿತ್ರದುರ್ಗ: ಪೋಕ್ಸೊ ಪ್ರಕರಣ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದ್ದ ಹಿನ್ನೆಲೆ ಮುರುಘಾ ಮಠದ ಡಾ ಶಿವಮೂರ್ತಿ ಶರಣರನ್ನು ಪೊಲೀಸರು ಬಂಧಿಸಿದ್ದಾರೆ.

 

ಮುರುಘಾ ಶ್ರೀಗಳ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಪ್ರಕರಣ ಸಂಬಂಧ ನ್ಯಾಯಧೀಶರಾದ ಬಿ ಕೆ ಕೋಮಲಾ ಅವರು ಬಂಧನ ವಾರೆಂಟ್ ಆದೇಶ ಹೊರಡಿಸಿದ್ದರು.

ಚಿತ್ರದುರ್ಗದ ಡಿವೈಎಸ್ಪಿ ಅನಿಲ್ ಕುಮಾರ್, ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪಿಐ ಮುದ್ದು ರಾಜ್ ನೇತೃತ್ವದ ತಂಡವು ದಾವಣಗೆರೆ ನಗರದ ದೊಡ್ಡಪೇಟೆಯಲ್ಲಿರುವ ವಿರಕ್ತ ಮಠದಲ್ಲಿ ಮುರುಘಾ ಶರಣರನ್ನು ಬಂಧಿಸಿದ್ದಾರೆ. ಈ ವೇಳೆ ಭಾರಿ ಸಂಖ್ಯೆಯಲ್ಲಿ ಭಕ್ತರು ನೆರೆದಿದ್ದರು. ಪೊಲೀಸರ ಬಿಗಿ ಬಂದೋಬಸ್ತಿನಲ್ಲಿ ಶರಣರನ್ನು ಬಂಧಿಸಿ, ಪೊಲೀಸ್​ ವಾಹನದಲ್ಲಿ ದಾವಣಗೆರೆಯಿಂದ ಚಿತ್ರದುರ್ಗಕ್ಕೆ ಕರೆದೊಯ್ಯಲಾಯಿತು. ಬಳಿಕ ನೇರವಾಗಿ ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣರನ್ನು ಹಾಜರುಪಡಿಸಲಾಗಿದೆ.


Spread the love

About Laxminews 24x7

Check Also

ಏಪ್ರಿಲ್‌ಗೆ ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಆಯೋಗ ಸೂಚನೆ

Spread the loveಬೆಂಗಳೂರು:ಕಳೆದ ನಾಲ್ಕೈದು ವರ್ಷಗಳಿಂದ ಒಂದಿಲ್ಲೊಂದು ಕಾರಣಗಳಿಂದ ಪದೇ ಪದೇ ಮುಂದೂಡಲಾಗಿದ್ದ ಕರ್ನಾಟಕ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಮುಂಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ