Breaking News

ನಾನು ಕಾಂಗ್ರೆಸ್ ಪಕ್ಷದ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ; ಶರಣಪ್ಪ ಕೊಟಗಿ

Spread the love

ಹುಬ್ಬಳ್ಳಿ : ಲೋಕಸಭಾ ಚುನಾವಣೆಗೆ ಟಿಕೆಟ್​ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದು, ನಾನೂ ಕೂಡಾ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕೆಪಿಸಿಸಿ ಸಂಯೋಜಕ ಶರಣಪ್ಪ ಕೊಟಗಿ ಅವರು ತಿಳಿಸಿದ್ದಾರೆ.

ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಮೊದಲು ಹಲವು ಬಾರಿ ಧಾರವಾಡ ಪಶ್ಚಿಮ ವಿಧಾನ ಸಭಾದ ಎಲ್ಲ ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳನ್ನು ಅತೀ ಹತ್ತಿರದಿಂದ ನೋಡಿದ್ದೇನೆ ಎಂದರು. ಕ್ಷೇತ್ರದ ಮತದಾರರ ತೀವ್ರ ಒತ್ತಾಸೆಯ ಮೇರೆಗೆ ಈ ಹಿಂದೆ ವಿಧಾನಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್‌ಗಾಗಿ ಪ್ರಯತ್ನಿಸಿ, ಅಂತಿಮ ಘಳಿಗೆಯಲ್ಲಿ ಪಕ್ಷದ ವರಿಷ್ಠರ ಮನವೊಲಿಕೆಗೆ ಬೆಲೆ ನೀಡಿ ಹಿಂದೆ ಸರಿದಿದ್ದೆ. ಈಗಲೂ ಸಹ ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಧರ್ಮಗಳ ಮತದಾರರ ತೀವ್ರ ಒತ್ತಾಯಕ್ಕೆ ಮಣಿದು ಮತ್ತು ಪಕ್ಷಕ್ಕಾಗಿ ಇಲ್ಲಿಯವರೆಗೆ ಶ್ರಮಿಸಿರುವ ದ್ಯೋತಕವಾಗಿ ಈ ಬಾರಿ ಕಾಂಗ್ರೆಸ್ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿದ್ದೇನೆ ಎಂದು ಹೇಳಿದರು.

ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಧಿಕ ಸಂಖ್ಯೆಯ ವೀರಶೈವ-ಲಿಂಗಾಯತ ಮತದಾರರು ಇರುವುದರಿಂದ ಮತ್ತು ಎಲ್ಲಾ ಸಮಾಜದ ಜನಾಂಗದವರ ಜೊತೆ ಒಳ್ಳೆಯ ಸಂಬಂಧ ಹೊಂದಿರುವುದರಿಂದ, ನಾನು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟರೆ ಅತ್ಯಧಿಕ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಹಿಂದುಳಿದ ವರ್ಗಗಳ ಮಠಾಧೀಶರು, ನಾಯಕರ ಸಭೆ ನ.3ರಂದು

Spread the love ಹುಬ್ಬಳ್ಳಿ: ರಾಷ್ಟ್ರೀಯ ಕೋಲಿ ಬೆಸ್ತ ಹಿಂದುಳಿದ ವರ್ಗಗಳ ಮಠಾಧೀಶರ ಮಹಾಸಭಾ ವತಿಯಿಂದ ನ.3ರಂದು ಬೆಳಿಗ್ಗೆ 10 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ