ಬೆಂಗಳೂರು: ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ(ಸಿಎಸ್) ಹಿರಿಯ ಐಎಎಸ್ ಅಧಿಕಾರಿ ರಜನೀಶ್ ಗೋಯಲ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಸದ್ಯಕ್ಕೆ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಗೋಯಲ್, ಡಿಸೆಂಬರ್ 1ರಂದು ಅಧಿಕಾರ ಸ್ವೀಕರಿಸುವರು.
ಪ್ರಸ್ತುತ ಮುಖ್ಯ ಕಾರ್ಯದರ್ಶಿಯಾಗಿರುವ ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30ರಂದು ಕೊನೆಗೊಳ್ಳಲಿದೆ. ಹಿರಿತನದ ಆಧಾರದಡಿ ರಜನೀಶ್ ಗೋಯಲ್ ಅವರನ್ನು ಮುಂದಿನ ಮುಖ್ಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಲಾಗಿದೆ. ಗೋಯಲ್ 1986ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು, 2024ರ ಜುಲೈನಲ್ಲಿ ನಿವೃತ್ತರಾಗಲಿದ್ದಾರೆ. ಹಾಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಇವರು ಕಾರ್ಯ ನಿರ್ವಹಿಸುತ್ತಿದ್ದಾರೆ.