ಹುಬ್ಬಳ್ಳಿ: ಉತ್ತರ ಕರ್ನಾಟಕ ಜನರ ಅಚ್ಚುಮೆಚ್ಚಿನ ರೈಲು ಎಂದೇ ಖ್ಯಾತಿ ಗಳಿಸಿದ್ದ ಹುಬ್ಬಳ್ಳಿ-ಬೆಂಗಳೂರು ಸೂಪರ್ ಫಾಸ್ಟ್ ರೈಲಿನ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿಗೆ ವೇಗದೂತದಂತೆ ಬರುತ್ತಿದ್ದ ಈ ರೈಲು ಅಂದರೆ ಎಲ್ಲರಿಗೂ ಅಚ್ಚು-ಮೆಚ್ಚು. ಆದರೆ, ಏಕಾಏಕಿ ಈ ರೈಲು ಸಂಚಾರವನ್ನು ರದ್ದು ಮಾಡಿ ನೈರುತ್ಯ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು-ಹುಬ್ಬಳಿ ಸೂಪರ್ ಫಾಸ್ಟ್ ರೈಲು ಉತ್ತರ ಕರ್ನಾಟಕ ಮಂದಿಗೆ ಅತಿ ವೇಗದ ರೈಲು. ಈ ರೈಲು ಅಂದ್ರೆ ಈ ಭಾಗದ ಜನರಿಗೆ ಒಂದು ತರಹದ ಖುಷಿ. ವೇಗವಾಗಿ ಬೆಂಗಳೂರಿನಿಂದ ಹುಬ್ಬಳ್ಳಿ ಪ್ರಯಾಣಿಕರನ್ನು ಹೊತ್ತು ತರಲು ಹೆಸರಾಗಿತ್ತು. ಆದರೆ ಇದು ತನ್ನ ಸಂಚಾರ ಸೇವೆಯನ್ನು ಏಕಾಏಕಿ ನಿಲ್ಲಿಸಿದೆ.