Breaking News

ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿಸಿದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರ ಹೇಳಿಕೆ

Spread the love

ಮಂಗಳೂರು: ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ, ವಿಪಕ್ಷನಾಯಕನ ಆಯ್ಕೆ ನಡೆದಿರುವ ಬೆನ್ನಲ್ಲೇ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ನಲ್ಲಿ ಆಂತರಿಕ ಜಗಳ ತಾರಕ್ಕೇರಿದೆ.

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಹಾಗೂ ಸತೀಶ್ ಜಾರಕಿಹೊಳಿ ತಂಡ ಇಬ್ಭಾಗವಾಗುತ್ತಿದೆ. ಇದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಹುದ್ದೆ ಬೇಡಿಕೆ ಇಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ ನಿಂದ ಹೊರ ಬರಲಿದ್ದಾರೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ