Breaking News

ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ:B.S.Y.

Spread the love

ಬೆಂಗಳೂರು: ತೆಲಂಗಾಣ ವಿಧಾನಸಭೆ ಚುನಾವಣೆಯ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.

ಯಡಿಯೂರಪ್ಪ ಇಂದು (ಬುಧವಾರ) ತೆಲಂಗಾಣಕ್ಕೆ ತೆರಳುವರು. ಬೆಳಿಗ್ಗೆ 7.40ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೈದರಾಬಾದ್​ಗೆ ಪ್ರಯಾಣಿಸಲಿದ್ದಾರೆ.

ಬೆಳಿಗ್ಗೆ 11.20ಕ್ಕೆ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಜಹೀರಾಬಾದ್​ನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುವ ಅವರು ಮಧ್ಯಾಹ್ನ 2ಕ್ಕೆ ರ‍್ಯಾಲಿಯಲ್ಲಿ ಭಾಗವಹಿಸುವರು. ಬಳಿಕ ಬೀದರ್​ಗೆ ಆಗಮಿಸಿ, ವಿಮಾನದ ಮೂಲಕ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಕ್ಷೇತ್ರವನ್ನೇ ಪುತ್ರ ವಿಜಯೇಂದ್ರ ಅವರಿಗೆ ಬಿಟ್ಟುಕೊಟ್ಟು ಚುನಾವಣಾ ರಾಜಕೀಯ ಭವಿಷ್ಯ ಭದ್ರಪಡಿಸಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನವನ್ನೂ ಕೊಡಿಸುವ ಮೂಲಕ ಮುಂದಿನ ರಾಜಕೀಯ ಭವಿಷ್ಯ ರೂಪಿಸಿದ್ದಾರೆ. ಈ ಮೂಲಕ ಓರ್ವ ಪುತ್ರ ಸಂಸದನಾದರೆ ಮತ್ತೋರ್ವ ಪುತ್ರ ಶಿಕಾರಿಪುರ ಶಾಸಕ ಹಾಗು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ. ಆ ಮಟ್ಟಿಗೆ ಪುತ್ರರಿಬ್ಬರ ರಾಜಕೀಯ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆ. ಇದೀಗ ರಾಜಕಾರಣದಲ್ಲಿ ಸಕ್ರಿಯರಾಗಿರುವ ಯಡಿಯೂರಪ್ಪ ಪಕ್ಷ ಸಂಘಟನೆಗೆ ಒತ್ತು ನೀಡಲು ಮುಂದಾಗಿದ್ದಾರೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ