Breaking News

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ

Spread the love

ಬೆಂಗಳೂರು: ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಶಕ್ತಿ ಯೋಜನೆ: ಶಕ್ತಿ ಯೋಜನೆ ಜಾರಿಗೊಳಿಸಿದ ನಂತರ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡ್​ದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ