ಇದರೊಂದಿಗೆ ರಾಜ್ಯದ ಪ್ರಮುಖ ಸುದ್ದಿಗಳ ಕ್ಷಣ ಕ್ಷಣದ ಮಾಹಿತಿಗಾಗಿ ಟಿವಿ9 ಡಿಜಿಟಲ್ ಲೈವ್ ಫಾಲೋ ಮಾಡಿ.Karnataka News Live : ನಿಗಮ ಮಂಡಳಿಗೆ ನೇಮಕಾತಿ ಪ್ರಕ್ರಿಯೆ ಸಂಬಂಧ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ನಡೆಸಲಾದ ಸಭೆ ಮುಕ್ತಾಯವಾಗಿದ್ದು, ನ.28 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಮಾಡಿ ಆದೇಶಿಸುವ ಸಾಧ್ಯತೆ ಇದೆ. ದೆಹಲಿಯಲ್ಲಿಂದು ಕಾವೇರಿ (Cauvery) ನೀರು ನಿಯಂತ್ರಣ ಸಮಿತಿ ಸಭೆ ನಿಗದಿಯಾಗಿದ್ದು, 11.30ಕ್ಕೆ ಸಿಡಬ್ಲ್ಯುಆರ್‌ಸಿ (CWRC) ಸಭೆ ನಡೆಯಲಿದೆ.
ಇನ್ನೊಂದೆಡೆ, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ (Siddaramaiah) ಅವರು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.
ಇಂದು ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇನ್ನೊಂದೆಡೆ, ಬರ ಪರಿಹಾರ ನೀಡುವಂತೆ ಕೇಂದ್ರದ ನಾಯಕರನ್ನು ಒತ್ತಾಯಿಸಲು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ (N Chaluvarayaswamy) ದೆಹಲಿಗೆ ತೆರಳಲಿದ್ದಾರೆ.