Breaking News

ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು: ಬೆಳಗಾವಿ ಎಸ್ಪಿ ಆದೇಶ

Spread the love

ಬೆಳಗಾವಿ: ಕರ್ತವ್ಯದ ವೇಳೆ ಎಣ್ಣೆ ಪಾರ್ಟಿ ಮಾಡಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.

ಭೀಮಾಶಂಕರ ಗುಳೇದ ಆದೇಶ ಹೊರಡಿಸಿದ್ದಾರೆ. ಚಿಕ್ಕೋಡಿ ತಾಲೂಕಿನ ನಾಗರಾಳ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, 112 ಪೆಟ್ರೋಲಿಂಗ್ ವಾಹನದಲ್ಲಿ ಎಣ್ಣೆ, ಮಾಂಸದೂಟ ಮಾಡಿದ್ದ ಸಿಬ್ಬಂದಿ ಎಚ್.ಎಮ್‌. ಕಮತೆ ಮತ್ತು ದುಮಾಳ ಅವರನ್ನು ಎಸ್ಪಿ ಅಮಾನತು ಮಾಡಿದ್ದಾರೆ.

ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಎಸ್ಪಿ ಡಾ. ಭೀಮಾಶಂಕರ ಗುಳೇದ ಅವರು, ಖಡಕಲಾಟ್ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಊಟ ಮಾಡುವ ನೆಪದಲ್ಲಿ ಸಾರಾಯಿ ಸೇವನೆ ಮಾಡಿರುವುದು ನನ್ನ ಬಗ್ಗೆ ಗಮನಕ್ಕೆ ಬಂದ ತಕ್ಷಣ ಶಿಸ್ತು ಕ್ರಮಕ್ಕೆ ಆದೇಶ ಮಾಡಿದ್ದೇನೆ. ಆ ಬಳಿಕ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶಿಸಿದ್ದೇನೆ. ಅಲ್ಲದೇ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ನಿಗಾ ಇಡಲು ವಿಫಲವಾಗಿದ್ದರಿಂದ ಚಿಕ್ಕೋಡಿ ಮತ್ತು ಖಡಕಲಾಟ್ ಎರಡು ಠಾಣೆ ಪಿಎಸ್‌ಐಗೆ ಶೋಕಾಸ್​ ನೋಟಿಸ್ ನೀಡಿದ್ದೇನೆ. ಚಿಕ್ಕೋಡಿ ಡಿಎಸ್​ಪಿಗೂ ಪ್ರಕರಣದ ಕುರಿತು ವರದಿ ಸಲ್ಲಿಸುವಂತೆ ಆದೇಶಿಸಿದ್ದೇನೆ ಎಂದರು.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ