Breaking News
Home / ರಾಜಕೀಯ / ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಿ: ನಿರ್ಮಲಾ ಸೀತಾರಾಮನ್​ಗೆ ರಾಜ್ಯ ಸಚಿವರ ಮನವಿ

ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಿ: ನಿರ್ಮಲಾ ಸೀತಾರಾಮನ್​ಗೆ ರಾಜ್ಯ ಸಚಿವರ ಮನವಿ

Spread the love

ದೆಹಲಿ/ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ.

ಈ ಸಂಬಂಧ ಶೀಘ್ರ ನಿರ್ಧಾರ ತೆಗೆದುಕೊಂಡು ಬರ ಪರಿಹಾರ ಹಣ ಬಿಡುಗಡೆಗೊಳಿಸಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಕೃಷಿ ಸಚಿವ ಚೆಲುವರಾಯಸ್ವಾಮಿ ಜೊತೆಗೂಡಿ ಗುರುವಾರ ದೆಹಲಿಯಲ್ಲಿ ಸಚಿವೆಯನ್ನು ಭೇಟಿ ಮಾಡಿದ ನಂತರ ಪತ್ರಕರ್ತರ ಜೊತೆ ಮಾತನಾಡಿದ ಕೃಷ್ಣ ಬೈರೇಗೌಡ, ರಾಜ್ಯದ 223 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಇಡೀ ರಾಜ್ಯ ಬರಪೀಡಿತ ಪರಿಸ್ಥಿತಿ ಎದುರಿಸುತ್ತಿದೆ. ಪರಿಣಾಮ, ರೈತರು ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ, ರಾಜ್ಯ ಸರ್ಕಾರದ ಮನವಿ (ಮೆಮೊರಾಂಡಂ) ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಿ, ಬರ ಪರಿಹಾರವನ್ನು ಆದಷ್ಟು ಶೀಘ್ರದಲ್ಲಿ ಬಿಡುಗಡೆಗೊಳಿಸಿ ಎಂದು ನಿರ್ಮಲಾ ಅವರಿಗೆ ಮನವಿ ಸಲ್ಲಿಸಿದ್ದೇವೆ.

ಪರಿಹಾರದ ಹಣವನ್ನು ವಿಳಂಬವಿಲ್ಲದೆ ಪಾರದರ್ಶಕ ಮತ್ತು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ತಲುಪಿಸುವ ಸಂಬಂಧ ಅಗತ್ಯ ಎಲ್ಲಾ ಕ್ರಮಗಳನ್ನು ರಾಜ್ಯ ಸರ್ಕಾರ ಈಗಾಗಲೇ ಕೈಗೊಂಡಿದೆ. ಹೀಗಾಗಿ, ಕೇಂದ್ರದ ಪರಿಹಾರದ ಹಣ ಬಿಡುಗಡೆ ಮಾಡುತ್ತಿದ್ದಂತೆ ಆ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು ಎಂಬುದನ್ನು ಮನವರಿಕೆ ಮಾಡಿಕೊಡಲಾಗಿದೆ ಎಂದು ವಿವರಿಸಿದರು.

ಸಣ್ಣ, ಅತಿಸಣ್ಣ ರೈತರ ಮಾಹಿತಿ: ರಾಜ್ಯದಲ್ಲಿರುವ ಸಣ್ಣ ಮತ್ತು ಅತಿ ಸಣ್ಣ ರೈತರ ನಿಖರ ಅಂಕಿಸಂಖ್ಯೆಯ ಮಾಹಿತಿಯ ಬಗ್ಗೆಯೂ ನಿರ್ಮಲಾ ಸೀತಾರಾಮನ್‌ಗೆ ಮನವರಿಕೆ ಮಾಡಿಕೊಡಲಾಗಿದೆ. ಪಿಎಂ ಕಿಸಾನ್ ಮತ್ತು ಆಧಾರ್ ಲಿಂಕ್ ‘ಫ್ರೂಟ್ಸ್’ ಡೇಟಾಬೇಸ್ ಪ್ರಕಾರ ರಾಜ್ಯದಲ್ಲಿ ಕನಿಷ್ಟ ಶೇ.70ಕ್ಕೂ ಅಧಿಕ ಸಂಖ್ಯೆಯಲ್ಲಿ ಸಣ್ಣ, ಅತಿಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ 2015ರ ಕೃಷಿ ಗಣತಿಯ ಪ್ರಕಾರ ರಾಜ್ಯದಲ್ಲಿ ಸಣ್ಣ-ಅತಿಸಣ್ಣ ರೈತರ ಸಂಖ್ಯೆ ಶೇ.44 ಎನ್ನುತ್ತಿವೆ. ಇದರಿಂದಾಗಿ ರಾಜ್ಯದ ರೈತರಿಗೆ ಪರಿಹಾರದಲ್ಲೂ ಅನ್ಯಾಯವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದೇವೆ ಎಂದರು.

ಕೇಂದ್ರ ಸರ್ಕಾರ ರಾಜ್ಯದ ನವೀಕೃತ ಡೇಟಾಬೇಸ್ ಮಾಹಿತಿಯನ್ನು ಆಧರಿಸಿ ಪರಿಹಾರ ಬಿಡುಗಡೆಗೊಳಿಸಬೇಕು. ಅಲ್ಲದೆ, ಪರಿಹಾರ ಹಣ ಬಿಡುಗಡೆ ಮಾಡುವ ಸಂದರ್ಭದಲ್ಲಿ ಕೇಂದ್ರದ ಮಾನದಂಡದಂತೆ ಸಾಧಾರಣ ಬರ ಎಂದು ಘೋಷಿಸಿರುವ ತಾಲೂಕುಗಳನ್ನೂ ಸಹ ಪರಿಹಾರಕ್ಕೆ ಪರಿಗಣಿಸಿ ಎಂದು ಕೇಂದ್ರ ಹಣಕಾಸು ಸಚಿವರಿಗೆ ಮನವಿ ನೀಡಿರುವುದಾಗಿ ತಿಳಿಸಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ