ಧಾರವಾಡ : ಜಿಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಧಾರವಾಡದ 3 ನೇ ಹೆಚ್ಚುವರಿ ಸೇಷನ್ ಕೋರ್ಟ್ ಆದೇಶಿಸಿದೆ.
ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ಕೋರ್ಟ್ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ನ.9ರ ವರೆಗೆ ಸಿಬಿಐ ವಶಕ್ಕೆ ನೀಡಿದ್ದ ಇಲ್ಲಿನ 3ನೇ ಜಿಲ್ಲಾ ಸತ್ರ ನ್ಯಾಯಾಲಯ ಇಂದು ಬೆಳಿಗ್ಗೆ ಹಾಜರು ಪಡೆಸಲಾಗಿತ್ತು. ಇಂದು ಕೋರ್ಟ್ ನ.23ರವರೆಗೆ ನ್ಯಾಯಾಂಗ ಬಂಧನ ವಿಧಿಸಿ, ಆದೇಶಿದೆ.