ತುಮಕೂರು: ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆದಿರುವ ಸಚಿವ ಸಂಪುಟ ನಿರ್ಧಾರದ ವಿಚಾರದಲ್ಲಿ ರಾಜ್ಯದ ಜನತೆ ಮುಂದೆ ಸರ್ಕಾರ ಬೆತ್ತಲಾಗಿದೆ. ಸಿಎಂ ಸಿದ್ದರಾಮಯ್ಯ ಅವರು ಆಕ್ಟ್, ಸೆಕ್ಷನ್ ಬಗ್ಗೆ ಮಾತನಾಡ್ತಾರೆ. ಅಂದು ಸಿಬಿಐ ಅನುಮತಿ ಕೇಳಿದ್ದರು. ಅದಕ್ಕೆ ಸರ್ಕಾರ ಅನುಮತಿ ನೀಡಿತ್ತು ಎಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಹೇಳಿದರು.
ತುಮಕೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಡಿಸಿಎಂ ನ್ಯಾಯಾಲಯಗಳಿಗೆ ಓಡಾಡಿದ್ದಾರೆ. ಅವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಲಯದಲ್ಲೇ ತೀರ್ಪಾಗಲಿ. ನ್ಯಾಯಾಲಯದ ಮುಂದೆ ಕ್ಲೀನ್ಚಿಟ್ ಪಡೆದು ಜನರ ಮುಂದೆ ಹೋಗಬೇಕಿತ್ತು. ಇದೊಂದು ನ್ಯಾಯಾಲಯಕ್ಕೆ ಸವಾಲ್ ಹಾಕಿದ ರೀತಿಯಲ್ಲಿದೆ ಎಂದು ಆರೋಪಿಸಿದರು.
ಸಿಬಿಐಗೆ ಸವಾಲ್ ಅಲ್ಲ, ನ್ಯಾಯಾಲಯಕ್ಕೆ ಸವಾಲ್: ಇಂತಹ ಪ್ರಕರಣಗಳನ್ನು ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡುವುದು ಸೂಕ್ತವಾಗಿರಲಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವು ಖಂಡಿಸುತ್ತೇನೆ. ಒಂದು ಸಲ ಎಫ್ಐಆರ್ ಆದ್ಮೇಲೆ ಚಾರ್ಜ್ ಶೀಟ್ ಕೊಟ್ಟರೆ ಬದಲಾವಣೆ ಮಾಡಲು ನ್ಯಾಯಾಧೀಶರ ಅನುಮತಿ ಪಡೆಯಬೇಕು. ಪ್ರಕರಣಗಳು ಒಂದು ಸಲ ಕೋರ್ಟ್ಗೆ ಹೋದ್ರೆ ನ್ಯಾಯಾಧೀಶರೇ ತೀರ್ಮಾನ ತೆಗೆದುಕೊಳ್ಳಬೇಕು. ಕ್ಯಾಬಿನೆಟ್ಗೆ ಯಾವುದೇ ಅಧಿಕಾರ ಇಲ್ಲ ಅನ್ನೋದು ನನ್ನ ಅಭಿಪ್ರಾಯ ಎಂದರು
ಕಾನೂನಾತ್ಮಕವಾಗಿ ಪ್ರಕ್ರಿಯೆ ನಡೆದಿರಲಿಲ್ಲ ಎಂಬ ಕಾಂಗ್ರೆಸ್ ಸಮರ್ಥನೆ ವಿಚಾರ. ಇಷ್ಟು ದಿನ ಏನ್ ಮಾಡ್ತಿದ್ರಿ. ಸ್ಪೀಕರ್ ಅನುಮತಿ ಪಡೆಯದೇ ಅಥವಾ ಅಂದಿನ ಅಡ್ವೊಕೇಟ್ ಜನರಲ್ ಅಡ್ವರ್ಸ್ ರಿಪೋರ್ಟ್ ಇದ್ದಾಗಲೂ ಕೋರ್ಟ್ ಗೆ ಬಂದಿದೆ ಎಂದು ಆರೋಪಿಸಿದರು.