Breaking News

ಮೈಸೂರಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ: ದನಗಾಹಿ ಮಹಿಳೆ ಕೊಂದು ತಿಂದ ವ್ಯಾಘ್ರ

Spread the love

ಮೈಸೂರು: ಹುಲಿ ದಾಳಿಗೆಮತ್ತೊಬ್ಬ ದನಗಾಹಿ ಮಹಿಳೆ ಬಲಿಯಾಗಿರುವ ಘಟನೆ, ಬಂಡೀಪುರ ರಾಷ್ಟ್ರೀಯ ಉದ್ಯಾನವನದ ನಂಜನಗೂಡು ತಾಲೂಕಿನ ಹೆಡಿಯಾಲ ಸಮೀಪವಿರುವ ಬಳ್ಳೂರುಹುಂಡಿ ಗ್ರಾಮದಲ್ಲಿ ಜರುಗಿದೆ.

ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ರತ್ನಮ್ಮ (52) ಮೃತ ದನಗಾಹಿ ಎಂದು ಗುರುತಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ 3.15ರ ಸುಮಾರಿಗೆ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ರತ್ನಮ್ಮ ಜಾನುವಾರು ಮೇಯಿಸುತ್ತಿದ್ದ ವೇಳೆ ಹುಲಿ ದಾಳಿ ಮಾಡಿ ಹೊತ್ಯೊಯ್ದಿದೆ. ರತ್ನಮ್ಮನರ ಕಿರುಚಾಟ ಕೇಳಿದ ಅಕ್ಕಪಕ್ಕದ ಜಮೀನಿನವರು, ಹುಲಿ ದಾಳಿ ಮಾಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ, ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಕಾಡಂಚಿನ ಪ್ರದೇಶದಿಂದ ಹೊರ ತಂದಿದ್ದಾರೆ. ಹೆಡಿಯಾಲ ಅರಣ್ಯ ಇಲಾಖೆಯ ಅಧಿಕಾರಿಗಳಾದ ನಾರಾಯಣ, ಪರಮೇಶ್ ನೇತೃತ್ವದಲ್ಲಿ ಮೃತ ದೇಹ ಹೊರ ತರಲಾಯಿತು.

ಸುಮಾರು ಒಂದು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿತ್ತು. ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ ಈಗ ಮತ್ತೆ ದನಗಾಯಿ ಮಹಿಮೆ ಬಲಿಯಾಗಿದ್ದಾರೆ ಎಂದು ಆರೋಪಿಸಿ, ಹೆಡಿಯಾಲ, ಬಳ್ಳೂರು ಹುಂಡಿ, ಮಹದೇವ ನಗರ ಗ್ರಾಮದ ನಿವಾಸಿಗಳು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಈ ಹಿಂದೆ ಕೂಡ ನಡೆದ ಘಟನೆ: ಜಮೀನಿನಲ್ಲಿ ದನ ಮೇಯಿಸುತ್ತಿದ್ದ ವೇಳೆ ರೈತನ ಮೇಲೆ ಹುಲಿ ದಾಳಿ ನಡೆಸಿ, ಕೊಂದು ತಿಂದಿರುವ ಘಟನೆ ಮೈಸೂರಿನ ಸರಗೂರು ತಾಲೂಕಿನ ಮೊಳೆಯೂರು ವಲಯ ಅರಣ್ಯ ಪ್ರದೇಶ ಬಳಿ ಕೆಲ ದಿನಗಳ ಹಿಂದೆ ನಡೆದಿತ್ತು. ತಾಲೂಕಿನ ಬಿ.ಮಟಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡಬೇಗೂರು ಗ್ರಾಮದ ರೈತ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಬಾಲಾಜಿ ನಾಯ್ಕ(42) ಎಂಬುವವರು ಹುಲಿ ದಾಳಿಗೆ ಬಲಿಯಾಗಿದ ದುರ್ದೈವಿ.

ಎಂದಿನಂತೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಮೊಳೆಯೂರುನ ತಮ್ಮ ಜಮೀನಿನಲ್ಲಿ ದನಗಳನ್ನು ಮೇಯಿಸುತ್ತಿದ್ದರು. ಈ ವೇಳೆ, ಆಹಾರ ಅರಸಿ ಕಾಡಿನಿಂದ ಬಂದಿದ್ದ ವ್ಯಾಘ್ರ ದನಗಳ ಮೇಲೆ ದಾಳಿ ನಡೆಸಿತ್ತು. ಇನ್ನೊಂದೆಡೆ ಹುಲಿ ಕಂಡು ದನಗಳು ಚದುರಿಹೋಗಿದ್ದವು. ಜಾನುವಾರುಗಳು ಸಿಗದ ಪರಿಣಾಮ ರೈತ ಬಾಲಜಿ ನಾಯ್ಕನ ಮೇಲೆ ಹುಲಿ ದಾಳಿ ನಡೆಸಿತ್ತು. ದಾಳಿಗೆ ರೈತ ಬಾಲಾಜಿ ನಾಯ್ಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೃತ ದೇಹವನ್ನು ಹುಲಿ ಕಾಡಿನೊಳಗೆ ಎಳೆದೊಯ್ದಿತ್ತು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ