Breaking News

ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದ ಡಾಕ್ಟರ್ ​ಹಠಾತ್​ ಹೃದಯಾಘಾತದಿಂದ ಸಾವು

Spread the love

ಚೆನ್ನೈ: ಜಿಮ್​ನಲ್ಲಿ ವ್ಯಾಯಾಮ ಮಾಡುತ್ತಿದ್ದ ವೇಳೆ ಹಠಾತ್​ ಹೃದಯಾಘಾತ ಸಂಭವಿಸಿ ಮಹಿಳಾ ಡಾಕ್ಟರೊಬ್ಬರು​ ಸಾವನ್ನಪ್ಪಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ದೇಹದ ತೂಕ ಇಳಿಸಲೆಂದು ವರ್ಕೌಟ್​ ಮಾಡುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಮೃತರನ್ನು ಅನ್ವಿತಾ(26) ಎಂದು ಗುರುತಿಸಲಾಗಿದೆ. ಇವರು ಚೆನ್ನೈನ ಕಿಲ್ಪಾಕ್ಕಂನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಮುಗಿಸಿದ್ದಾರೆ. ಖ್ಯಾತ ನೇತ್ರಶಾಸ್ತ್ರಜ್ಞರ ಪುತ್ರಿ ಅನ್ವಿತಾ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದರು.

ಇಂದು ಕಿಲ್ಪಾಕ್ಕಂನ ನ್ಯೂ ಅವಡಿ ರಸ್ತೆಯಲ್ಲಿರುವ ಖಾಸಗಿ ಫಿಟ್‌ನೆಸ್ ಸೆಂಟರ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದರು. ಈ ವೇಳೆ, ಇದ್ದಕ್ಕಿದ್ದಂತೆ ಕುಸಿದ ಬಿದ್ದು ಮೂರ್ಛೆ ಹೋಗಿದ್ದಾರೆ. ಗಮನಿಸಿದ ಜಿಮ್ ಸಿಬ್ಬಂದಿ ಕೂಡಲೇ ಅನ್ವಿತಾರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಂತರ ಹೆಚ್ಚಿನ ಯುವಜನರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಘಟನೆಗಳ ವರದಿಯಾಗುತ್ತಿವೆ. ಕೊರೊನಾ ಲಸಿಕೆ ಪಡೆದವರಲ್ಲಿ ಹೃದಯಾಘಾತ ಸಂಭವಿಸುತ್ತಿದ್ದೆ ಎಂದು ಕೆಲವರು ಆರೋಪಿಸುತ್ತಿದ್ದಾರೆ. ಆದರೆ, ಹೃದಯಾಘಾತದಿಂದ ಹೆಚ್ಚಾಗುತ್ತಿರುವುದಕ್ಕೆ ಕರೋನಾ ಲಸಿಕೆ ಕಾರಣವಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಇತ್ತೀಚೆಗೆ ಸ್ಪಷ್ಟಪಡಿಸಿದೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ