Breaking News

ಸೈನಿಕರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರು ಹುತಾತ್ಮ ಸಾರ್ವಜನಿಕರಿಂದ ಗೌರವ ಸಮರ್ಪಣೆ

Spread the love

ಬೆಂಗಳೂರು: ಹುತಾತ್ಮ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಆನೇಕಲ್ ತಾಲೂಕಿನ ಜಿಗಣಿ ಬಳಿಯ ನಂದನವನ ಲೇಔಟ್​ನ ಅವರ ಮನೆ ಬಳಿ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆಯಿಂದ ಹಲವು ಗಣ್ಯರು ಪ್ರಾಂಜಲ್​ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ವಿರೋಧ ಪಕ್ಷದ ನಾಯಕ ಆರ್​ ಅಶೋಕ್​, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಸಂಸದ ಡಿ ಕೆ ಸುರೇಶ್ ಮುಂತಾದ ಗಣ್ಯರು ಪ್ರಾಂಜಲ್​ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು. ರಾಜ್ಯ ಸರ್ಕಾರದಿಂದ ಗೌರವ ರಕ್ಷಣೆ ಸಮರ್ಪಣೆ ಹಾಗೂ ಸೈನಿಕ ಗೌರವ ರಕ್ಷಣೆ ಸಮರ್ಪಿಸಲಾಯಿತು.

 ಮಾರ್ಗದ ಉದ್ದಕ್ಕೂ ಮಕ್ಕಳ ಜಯಘೋಷ

ನ. 22 ರಂದು ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭಯೋತ್ಪಾದಕರು ಹಾಗೂ ಸೈನಿಕರ ಮಧ್ಯೆ ನಡೆದ ಗುಂಡಿನ ದಾಳಿಯಲ್ಲಿ ಯೋಧ ಕ್ಯಾಪ್ಟನ್​ ಪ್ರಾಂಜಲ್​ ಅವರು ಹುತಾತ್ಮರಾಗಿದ್ದರು. ಶುಕ್ರವಾರ ರಾತ್ರಿ ಪಾರ್ಥಿವ ಶರೀರವನ್ನು ಬೆಂಗಳೂರು ಹೆಚ್​ಎಎಲ್​ ವಿಮಾನ ನಿಲ್ದಾಣಕ್ಕೆ ತರಲಾಗಿತ್ತು. ಅಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ತಾವರ್​ ಚಂದ್​ ಗೆಹ್ಲೋಟ್​, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಅಂತಿಮ ನಮನ ಸಲ್ಲಿಸಿದ್ದರು. ನಂತರ ಪಾರ್ಥೀವ ಶರೀರವನ್ನು ಬನ್ನೇರುಘಟ್ಟದಲ್ಲಿರುವ ಅವರ ನಿವಾಸಕ್ಕೆ ತರಲಾಗಿತ್ತು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ