Breaking News

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.4ರಿಂದ ನಡೆಯುವ ಚಳಿಗಾಲದ ಅಧಿವೇಶನಕ್ಕಾಗಿ ಭರದ ಸಿದ್ಧತೆ

Spread the love

ಬೆಳಗಾವಿ: ಡಿ.4 ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭರದ ಸಿದ್ಧತೆ ನಡೆಯುತ್ತಿದೆ.

ಸೌಧದ ಸ್ವಚ್ಛತೆ ಸೇರಿ ಇನ್ನಿತರ ಕಾರ್ಯಗಳಲ್ಲಿ ಸಿಬ್ಬಂದಿ‌ ಮಗ್ನರಾಗಿದ್ದಾರೆ. ಹೌದು, ಹತ್ತು ದಿನಗಳ ಚಳಿಗಾಲ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸರ್ವ ರೀತಿಯಲ್ಲೂ ಸನ್ನದ್ಧವಾಗುತ್ತಿದೆ.

 ಬೆಳಗಾವಿಯ ಸುವರ್ಣ ವಿಧಾನಸೌಧಅಧಿವೇಶನದ ಹಿನ್ನೆಲೆ ಸುವರ್ಣ ಸೌಧ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತಿದೆ. ಸೌಧದ ಪ್ರವೇಶ ದ್ವಾರಗಳ ಕಂಬಗಳು ಮತ್ತು ಒಳ ಛಾವಣಿಗೆ ಬಣ್ಣವನ್ನೂ ಬಳಿಯಲಾಗುತ್ತಿದೆ. ಇನ್ನು ವಿಧಾನಸಭೆ ಮತ್ತು ವಿಧಾನ ಪರಿಷತ್ ಸಭಾಂಗಣ, ಮುಖ್ಯಮಂತ್ರಿ, ಸಚಿವರು ಹಾಗೂ ಅಧಿಕಾರಿಗಳ ಕಚೇರಿ, ಸೌಧದ ಮೆಟ್ಟಿಲುಗಳು ಸೇರಿ ಇಡೀ ಸೌಧವನ್ನು ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾರೆ.

 ಸುವರ್ಣ ಸೌಧದ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ಗಮನ ಸೆಳೆಯುತ್ತಿರುವ ಅಲಂಕಾರಿಕ ಹೂವಿನ ಸಸಿಗಳು: ಸುವರ್ಣ ವಿಧಾನಸೌಧಕ್ಕೆ ತೆರಳುವ ರಸ್ತೆಯ ವಿಭಜಕದಲ್ಲಿ ಅಲಂಕಾರಿಕ ಹೂವಿನ ಸಸಿಗಳನ್ನು ನೆಡಲಾಗುತ್ತಿದೆ. ಜಿನಿಯಾ, ಸಲಿಯಾ, ಪಿಂಟುನಿಯಾ, ಅಪೇಲಿಯಾ ಸೇರಿ ಮತ್ತಿತರ ಅಲಂಕಾರಿಕ ಹೂವುಗಳು ಸೌಧದ ಮೆರಗನ್ನು ಹೆಚ್ಚಿಸಲಿವೆ. ಇನ್ನು ಸುವರ್ಣಸೌಧ ಆವರಣದಲ್ಲಿ ನಿರ್ಮಿಸಿರುವ ಹೆಲಿಪ್ಯಾಡ್ ನಿಂದ ಸೌಧಕ್ಕೆ ಹೋಗಲು ಹೊಸದಾಗಿ ರಸ್ತೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಅಲ್ಲದೇ ಸೌಧದ ಸುತ್ತಲೂ ಬೆಳೆದಿದ್ದ ಹುಲ್ಲು, ಕಸ, ಮುಳ್ಳನ್ನು ತೆರವುಗೊಳಿಸಲಾಗುತ್ತಿದೆ. ಒಟ್ಟಾರೆ ಅಧಿವೇಶನ ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ಮತ್ತು ಸಿಬ್ಬಂದಿ ಅವಿರತವಾಗಿ ಶ್ರಮಿಸುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ