ನವದೆಹಲಿ : 2018ರಲ್ಲಿ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಬಂಧನಕ್ಕೆ ಒಳಗಾಗಿ ಜೈಲು ಸೇರಿರುವ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿಯ ಜಾಮೀನು ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಮೂಲಕ ಅರ್ನಬ್ ಗೋಸ್ವಾಮಿಗೆ ಜೈಲೇ ಗತಿಯಾದಂತೆ ಆಗಿದೆ.
2018ರ ಆತ್ಮಹತ್ಯೆ ಪ್ರಚೋದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಹಿಂದೆ ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಅವರನ್ನು ಮುಂಬೈ ಪೆÇಲೀಸರು ಬಂಧಿಸಿದ್ದರು. ಈ ಸಂಬಂಧ ಜಾಮೀನಿಗಾಗಿ ಬಾಂಬೆ ಹೈಕೋರ್ಟ್‍ಗೆ ಅರ್ನಬ್ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ನಬ್ ಗೋಸ್ವಾಮಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್, ಜಾಮೀನಿಗಾಗಿ ಕೆಳಹಂತದ ನ್ಯಾಯಾಲಯಕ್ಕೆ ಮೊದಲು ಅರ್ಜಿ ಸಲ್ಲಿಸುವಂತೆ ಸೂಚಿಸಿ, ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಹೀಗಾಗಿ ಅರ್ನಬ್ ಗೋಸ್ವಾಮಿಯು ಜಾಮೀನಿಗಾಗಿ ಆಲಿಬಾಗ್ ಸೆಷನ್ ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.
Check Also
ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ
Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …