Breaking News

ಎಕ್ಸ್‌ ಅಂಡ್‌ ವೈ‌’ ಹಿಂದೆ ಬಿದ್ದ ರಾಮಾ ರಾಮಾ ರೇ ನಿರ್ದೇಶಕ ಸತ್ಯ ಪ್ರಕಾಶ್‌

Spread the love

ರಾಮಾ ರಾಮಾ ರೇ ನಿರ್ದೇಶಕ ಡಿ ಸತ್ಯ ಪ್ರಕಾಶ್‌ ಅವರು ‘ಎಕ್ಸ್‌ ಅಂಡ್‌ ವೈ‌’ ಎಂಬ ಚಿತ್ರದ ಮೂಲಕ ಮತ್ತೆ ಸಿನಿಮಾ ಅಖಾಡಕ್ಕೆ ಇಳಿದಿದ್ದಾರೆ.

ರಾಷ್ಟ್ರ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಡಿ. ಸತ್ಯ ಪ್ರಕಾಶ್‌ ಚಿತ್ರ ಸೆಟ್ಟೇರಿತು ಎಂದರೆ ಹಲವು ವಿಶೇಷತೆಗಳನ್ನು ಹೊಂದಿರುತ್ತದೆ ಎಂದು ಪ್ರೇಕ್ಷಕರು ಮತ್ತು ಚಿತ್ರೋದ್ಯಮದ ಮಂದಿ ಎದುರು ನೋಡುತ್ತಾರೆ.

ಅದೇ ರೀತಿ ಸತ್ಯ ಪ್ರಕಾಶ್ ಕೂಡ ಕಂಟೆಂಟ್ ಹಾಗೂ ಸಂದೇಶ ಇರುವ ಚಿತ್ರಗಳನ್ನು ಮಾಡಿಕೊಂಡು ಬರ್ತಾ ಇದ್ದಾರೆ ನಿರ್ದೇಶಕ ಸತ್ಯ. ಯೆಸ್ ಬಹಳ ದಿನಗಳ ನಂತರ ಈಗ ಅಳೆದು ತೂಗಿ ಅತ್ಯಾಪ್ತ ಕಥೆ ಮಾಡಿಕೊಂಡು ಅದಕ್ಕೆ ‘ಎಕ್ಸ್ ಅಂಡ್‌ ವೈ’ ಎಂಬ ಶೀರ್ಷಿಕೆ ಇಟ್ಟುಕೊಂಡು ಸತ್ಯ ಪ್ರಕಾಶ್ ಮತ್ತೆ ಸಿನಿಮಾ ಅಖಾಡಕ್ಕೆ ಇಳಿದಿದ್ದಾರೆ.

 ‘ಎಕ್ಸ್‌ ಅಂಡ್‌ ವೈ‌’ ಚಿತ್ರಕ್ಕೆ ಸತ್ಯ ಪ್ರಕಾಶ್‌ ಆಯಕ್ಷನ್ ಕಟ್ಸತ್ಯ ಪಿಕ್ಚರ್ಸ್‌ ಬ್ಯಾನರ್​ನಡಿ ಚಿತ್ರ ನಿರ್ಮಾಣ: ತಮ್ಮ ಹಿಂದಿನ ಮೂರು ಚಿತ್ರಗಳಲ್ಲಿ ಮೂಡಿಸಿದ ವಿಶೇಷತೆಗಳಂತೆ ಇಲ್ಲೂ ಚಿತ್ರದ ಟೈಟಲ್‌, ಆರಿಸಿಕೊಂಡ ಕಥೆ, ಲೊಕೇಶನ್ಸ್‌, ಕಲಾವಿದರ ಆಯ್ಕೆಯಲ್ಲದೆ ತಾವೇ ಮುಖ್ಯ ಪಾತ್ರಧಾರಿಯಾಗಿ ನಟನೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ಬೆಳಗಿನ ಜಾವ ಬ್ರಾಹ್ಮಿ ಮುಹೂರ್ತದಲ್ಲಿ ಜಯ ನಗರದ ತಮ್ಮದೇ ಕಚೇರಿಯಲ್ಲಿ ಸ್ನೇಹಿತರು, ಕಲಾವಿದರು ಹಾಗೂ ತಮ್ಮ ತಂಡದ ತಂತ್ರಜ್ಞರನ್ನೊಳಗೂಡಿ ಸತ್ಯ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ ಮುಹೂರ್ತ ಮುಗಿಸಿಕೊಂಡಿದ್ದಾರೆ.

ಬೆಂಗಳೂರು, ಮಂಗಳೂರಿನಲ್ಲಿ ಚಿತ್ರೀಕರಿಸಲು ಯೋಜನೆ: ನಿರ್ಮಾಣ ಹಾಗೂ ನಿರ್ದೇಶನದ ಜೊತೆಗೆ ಸತ್ಯಪ್ರಕಾಶ್‌ ಹಾಗೂ ಅಥರ್ವ ಪ್ರಕಾಶ್‌ ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್‌ ಛಾಯಾಗ್ರಹಣ, ವಾಸುಕಿ ವೈಭವ್‌ ಸಂಗೀತ ನರ್ದೇಶನ, ಬಿ.ಎಸ್‌. ಕೆಂಪರಾಜು ಅವರ ಸಂಕಲನ ಇದೆ. ವರದರಾಜ್‌ ಕಾಮತ್‌ ಕಲಾ ನಿರ್ದೇಶನ ಮಾಡುತ್ತಿದ್ದಾರೆ. ಇಡೀ ಚಿತ್ರ ಬೆಂಗಳೂರು ಮತ್ತು ಮಂಗಳೂರು ಸುತ್ತ ಮುತ್ತಲಿನ ಪರಿಸರದಲ್ಲಿ ಚಿತ್ರೀಕರಿಸಲು ಯೋಜಿಸಲಾಗಿದೆ ಎಂದು ಸತ್ಯಪ್ರಕಾಶ್‌ ತಿಳಿಸಿದ್ದಾರೆ.


Spread the love

About Laxminews 24x7

Check Also

ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ

Spread the love ಲಾರಿ ಡಿಕ್ಕಿ ಹಿನ್ನೆಲೆ ಪಲ್ಟಿಯಾದ ಐಸ್ ಕ್ಯೂಬ್ ತುಂಬಿದ ಟಂಟಂ ವಾಹನ ಇಳಕಲ್ ಹೊರವಲಯದ ರಾಷ್ಟ್ರೀಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ