Breaking News
Home / ರಾಜಕೀಯ / ಉತ್ತರಕನ್ನಡದಲ್ಲಿ ಈ ಬಾರಿ ಮತ್ತೆ ಸಂಸದ ಅನಂತಕುಮಾರ್ ಹೆಗಡೆ ಸ್ಪರ್ಧಿಸಲ್ಲ ಎಂಬ ಊಹಾಪೋಹ

ಉತ್ತರಕನ್ನಡದಲ್ಲಿ ಈ ಬಾರಿ ಮತ್ತೆ ಸಂಸದ ಅನಂತಕುಮಾರ್ ಹೆಗಡೆ ಸ್ಪರ್ಧಿಸಲ್ಲ ಎಂಬ ಊಹಾಪೋಹ

Spread the love

ಕಾರವಾರ: ಮುಂಬರುವ ಲೋಕಸಭೆ ಚುನಾವಣೆಗೆ ಇನ್ನೂ ಕೆಲ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಮುಖಂಡರು ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಉತ್ತರಕನ್ನಡ ಜಿಲ್ಲೆಯಲ್ಲಿ ಬರಡಾಗಿದ್ದ ಜೆಡಿಎಸ್ ಪಾಲಿಗೆ ಓಯಸಿಸ್ ಸಿಕ್ಕಂತಾಗಿದೆ.‌ ಇಷ್ಟು ದಿನಗಳ ಕಾಲ ಸೈಲೆಂಟ್​​​ ಆಗಿದ್ದ ಜೆಡಿಎಸ್ ನಾಯಕರು ಇದೀಗ ಲೋಕಸಭೆ ಚುನಾವಣೆಗೆ ತಾವೂ ಕೂಡ ಆಕಾಂಕ್ಷಿಗಳೆಂದು ಹೇಳಿಕೊಂಡಿದ್ದಾರೆ.

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ಉತ್ತರಕನ್ನಡ ಜಿಲ್ಲೆಯಲ್ಲಿ ಸತ್ವ ಕಳೆದುಕೊಂಡಿದ್ದ ಜೆಡಿಎಸ್‌ಗೆ ಮತ್ತೆ ಜೀವಕಳೆ ತುಂಬಿದಂತಾಗಿದೆ. ಈ ಮೈತ್ರಿ ಹಾಗೂ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಮತ್ತೆ ಸ್ಪರ್ಧಿಸಲ್ಲ ಎಂಬ ಊಹಾಪೋಹಗಳು ಜಿಲ್ಲೆಯ ಲೋಕಸಭೆ ಟಿಕೆಟ್ ಮೇಲೆ ಎಲ್ಲರ ಕಣ್ಣು ಬೀಳುವಂತೆ ಮಾಡಿದೆ.

ಲೋಕಸಭೆ ಚುನಾವಣೆ ಸ್ಪರ್ಧೆ ಸಂಬಂಧ ಅನಂತಕುಮಾರ್ ಹೆಗಡೆ ಅವರ ಬಾಯಿಯಿಂದಲೇ ಸ್ಪಷ್ಟತೆ ಹೊರ ಬರಲು ಕಾಯುತ್ತಿರುವವರು ಬಹಳಷ್ಟು ಮಂದಿ ಇದ್ದಾರೆ. ಜಿಲ್ಲೆಯಲ್ಲಿ ಅನಂತಕುಮಾರ್​ ಹೆಗಡೆ ಪ್ರಾಬಲ್ಯ ಅರಿತಿರುವ ಆಕಾಂಕ್ಷಿಗಳು ಅವರನ್ನು ಭೇಟಿಯಾಗಿ ಬರುತ್ತಾರೆಯೇ ಹೊರತು ತಮಗೆ ಬೆಂಬಲ ನೀಡಿ ಎಂದು ಹೇಳುವ ಧೈರ್ಯ ಮಾಡುತ್ತಿಲ್ಲ. ಒಂದು ವೇಳೆ ಕೇಂದ್ರದಿಂದ ಅನಂತಕುಮಾರ್ ಹೆಗಡೆ ಅವರೇ ಸ್ಪರ್ಧಿಸಬೇಕೆಂದು ಆದೇಶ ಬಂದರೆ, ಮತ್ತೆ ಅವರೇ ಕಣಕ್ಕಿಳಿಯುವುದರಲ್ಲಿ ಎರಡು ಮಾತಿಲ್ಲ.

ಲೋಕಸಭೆ ಆಕಾಂಕ್ಷಿ ಎಂದ ಆಸ್ನೋಟಿಕರ್: ಆದರೆ, ರಾಜ್ಯದಲ್ಲಿನ ಮೈತ್ರಿಯಿಂದಾಗಿ ಇಷ್ಟು ದಿನ ಸುಮ್ಮನಿದ್ದ ಜೆಡಿಎಸ್ ನಾಯಕರು ಇದೀಗ ಲೋಕಸಭೆ ಚುನಾವಣೆಗೆ ತಾವೂ ಸಹ ಆಕಾಂಕ್ಷಿಗಳೆಂದು ಘೋಷಿಸಿದ್ದಾರೆ. ಬಿಜೆಪಿ- ಜೆಡಿಎಸ್ ಮೈತ್ರಿಯಾದ ಬಳಿಕ ಸಂಪೂರ್ಣ ಬದಲಾದ ಹೇಳಿಕೆ ನೀಡುತ್ತಿರುವ ಆನಂದ್ ಆಸ್ನೋಟಿಕರ್, ”ನಾನು ಲೋಕಸಭೆ ಚುನಾವಣೆಯ ಆಕಾಂಕ್ಷಿ ಎಂದು ಹಿಂದಿನಿಂದಲೂ ಹೇಳುತ್ತಾ ಬಂದಿದ್ದೇನೆ. ನಾನು ಮೋದಿಯವರ ಅಭಿಮಾನಿ ಎಂದು ಅಂದಿನಿಂದಲೂ ಹೇಳಿದ್ದು, ಅವರ ವಿರುದ್ಧ ಯಾವ ವಿಷಯವನ್ನೂ ಮಾತನಾಡಿಲ್ಲ. ನಮ್ಮ ರಾಷ್ಟ್ರ ಉಳಿಬೇಕಾದ್ರೆ, ಅಭಿವೃದ್ಧಿಗೆ ಪ್ರಧಾನಿ ಮೋದಿಯವರ ಅವಶ್ಯಕತೆಯಿದೆ” ಎಂದಿದ್ದಾರೆ.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ