Breaking News
Home / ರಾಜಕೀಯ / ಹೆಣ್ಣು ಭ್ರೂಣ ಪತ್ತೆ ಇಂಥ ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಜನರ ವಿರುದ್ಧ ಕಠಿಣ ಕ್ರಮ :C.M.

ಹೆಣ್ಣು ಭ್ರೂಣ ಪತ್ತೆ ಇಂಥ ದುಷ್ಕೃತ್ಯಗಳಲ್ಲಿ ಭಾಗಿಯಾಗುವ ಜನರ ವಿರುದ್ಧ ಕಠಿಣ ಕ್ರಮ :C.M.

Spread the love

ಬೆಂಗಳೂರು: ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಭಾರತದ ಸಂವಿಧಾನ ದಿನಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅಂಬೇಡ್ಕರ್​​ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ ಬಳಿಕ ಅವರು ಮಾತನಾಡಿದರು.

ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬಂದಿರುವ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಅದರ ಬಗ್ಗೆ ಒಂದು ಸಭೆ ಮಾಡಿ ಸೂಕ್ತ ಕ್ರಮದ ನಿರ್ಣಯ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಮುಂದುವರೆದು ಮಾತನಾಡಿ, ತೆಲಂಗಾಣದಲ್ಲಿ ಇಂದು ನಮ್ಮ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋಗುತ್ತಿದ್ದೇನೆ. ನಮಗೆ ಮಾಹಿತಿ ಇರುವ ಪ್ರಕಾರ ಅಲ್ಲಿ ಶೇ 100ಕ್ಕೆ 100 ರಷ್ಟು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಂದು ತಂಡ ಸಿಎಂ ಸ್ಥಾನದಿಂದ ಇಳಿಸಲು ಹೊರಟಿದೆ ಎಂಬ ಬಿಜೆಪಿ ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಪಾಪ ಅವರು ಈಗ ವಿಪಕ್ಷ ನಾಯಕರು. ಏನೇನೋ ಮಾತನಾಡ್ತಾರೆ, ಮಾತನಾಡಲಿ ಎಂದರು.

ಜಾತಿ ಗಣತಿ ಕುರಿತು ಶಾಮನೂರು ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸಿಎಂ, ಅದರ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದಷ್ಟೇ ತಿಳಿಸಿದರು.

ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠವಾಗಿದ್ದು, ದೇಶದ ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆಯೇ ಸಂವಿಧಾನದ ಆಶಯ. ಇಂದು ಸಂವಿಧಾನ ಅಂಗೀಕಾರವಾದ ದಿನ. 1949ರ ನವೆಂಬರ್ 26ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ನಂತರ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ ಎಂದು ಸಿಎಂ ಹೇಳಿದರು.


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ