Home / ಜಿಲ್ಲೆ / ಬೆಳಗಾವಿ / ಗೋಕಾಕ / ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ: ಸತೀಶ ಜಾರಕಿಹೊಳಿ

ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ: ಸತೀಶ ಜಾರಕಿಹೊಳಿ

Spread the love

ಗೋಕಾಕ: ಪರಿಸರ ರಕ್ಷಣೆ ಹಾಗೂ ಕ್ರೀಡೆಗಳಿಗೆ ದೇಶದಲ್ಲಿ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಅವರು, ಸೋಮವಾರದಂದು ನಗರದ ಮಹರ್ಷಿ ಶ್ರೀ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯಿಂದ ಹಮ್ಮಿಕೊಂಡ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

೧೪೦ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ. ಕ್ರೀಡೆಗೆ ಹೆಚ್ಚಿನ ಮಹತ್ವ ನೀಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿ ಅಂತರಾಷ್ಟಿçÃಯ ಮಟ್ಟದಲ್ಲಿ ದೇಶದ ಕೀರ್ತಿಯನ್ನು ಹೆಚ್ಚಿಸುವ ಕಾರ್ಯದಲ್ಲಿ ನಾವೆಲ್ಲಾ ಪಾಲ್ಗೊಳ್ಳಬೇಕಿದೆ. ಇಲಾಖೆಯ ಮುಖ್ಯಸ್ಥರು ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ಕಾರ್ಯವಾಗಬೇಕು.

ಕೆಲವೇ ಇಲಾಖೆಗಳಲ್ಲಿ ಇಂತಹ ಕಾರ್ಯವಾಗುತ್ತಿದ್ದು ಉಳಿದ ಇಲಾಖೆಗಳು ಕ್ರೀಡೆಗಳನ್ನು ಉತ್ತೇಜಿಸುವಂತೆ ಕರೆ ನೀಡಿದ ಅವರು, ಅರಣ್ಯ ಇಲಾಖೆ ಇಂತಹ ಕಾರ್ಯಗಳ ಮೂಲಕ ರಾಷ್ಟçದಲ್ಲಿ ಮಾದರಿಯಾಗಿ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.


Spread the love

About Laxminews 24x7

Check Also

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

Spread the love ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ