Breaking News

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪರ ಮುಖ್ಯ ಕಾರ್ಯದರ್ಶಿಯಾಗಿ ಎಲ್‌.ಕೆ.ಅತೀಕ್‌ ಅವರನ್ನು ನೇಮಿಸಿದ ಸರ್ಕಾರ

Spread the love

ಬೆಂಗಳೂರು: ರಾಜ್ಯ ಸರ್ಕಾರದಮುಖ್ಯ ಕಾರ್ಯದರ್ಶಿ (ಸಿಎಸ್) ಹುದ್ದೆಗೆ ಡಾ.ರಜನೀಶ್‌ ಗೋಯೆಲ್‌ ನೇಮಕಗೊಂಡಿರುವ ಹಿನ್ನೆಲೆಯಲ್ಲಿ, ಅವರಿಂದ ತೆರವಾದ ಸಿಎಂ ಅವರ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಗೆ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಎಲ್‌.ಕೆ.ಅತೀಕ್‌ ಅವರನ್ನು ನೇಮಿಸಲಾಗಿದೆ.

 

ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಪ್ರಭಾರಿ ಹೊಣೆಯನ್ನು ಎಲ್‌.ಕೆ.ಅತೀಕ್‌ ಅವರಿಗೆ ವಹಿಸಲಾಗಿದೆ. ಇದಕ್ಕೂ ಮುನ್ನ ಎಲ್.ಕೆ.ಅತೀಕ್​ ಅವರಿಗೆ ಐಎನ್‌ಎಸ್ ಪ್ರಸಾದ್ ನಿವೃತ್ತಿಯಿಂದ ತೆರವಾದ ಹಣಕಾಸು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜವಾಬ್ದಾರಿ ‌ನೀಡಲಾಗಿತ್ತು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ