Breaking News

ಶಬರಿಮಲೆಗೆ ವೋಲ್ವೊ ಬಸ್‌ ಸೇವೆ ಆರಂಭ

Spread the love

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳಲು ಪ್ರಯಾಣಿಕರ ಅನುಕೂಲತೆಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಬೆಂಗಳೂರಿನಿಂದ ನೇರ ಶಬರಿಮಲೆಗೆ ವೋಲ್ವೊ ಬಸ್‌ ಸೇವೆ ಆರಂಭ ಮಾಡಲಿದೆ.

 

ಡಿಸೆಂಬರ್‌ 1 ರಿಂದ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್‌ ಸಂಚಾರ ಪ್ರಾರಂಭವಾಗಲಿದೆ. ಪ್ರತಿ ನಿತ್ಯ ಬೆಂಗಳೂರು – ನೀಲಕ್ಕಲ್ (ಪಂಪಾ- ಶಬರಿಮಲೈ) ನಡುವೆ ಬಸ್​​ ಸಂಚಾರ ಇರಲಿದೆ. ವೋಲ್ವೊ ಬಸ್‌ ಬೆಂಗಳೂರಿನ ಶಾಂತಿನಗರ ಬಸ್‌ ನಿಲ್ದಾಣದಿಂದ ಹೊರಡಲಿದೆ. ಪ್ರತಿದಿನ ಮಧ್ಯಾಹ್ನ 1.50 ಗಂಟೆಗೆ ಹೊರಡಲಿರುವ ಬಸ್ ಮರುದಿನ ಬೆಳಗ್ಗೆ 6.45 ಕ್ಕೆ ಪಂಪಾ ತಲುಪಲಿದೆ. ಮತ್ತೊಂದು ಬಸ್‌ ದಿನಾಲೂ ಸಂಜೆ ಪಂಪಾದಿಂದ 6 ಗಂಟೆಗೆ ಹೊರಟು ಮರುದಿನ ಬೆಳಗ್ಗೆ 10 ಗಂಟೆ ವೇಳೆಗೆ ಬೆಂಗಳೂರು ತಲುಪಲಿದೆ.

ಟಿಕೆಟ್‌ ದರ ಹೀಗಿದೆ: ಶಬರಿಮಲೆಗೆ ಈ ವೋಲ್ವೊ ಬಸ್​ನಲ್ಲಿ ಪ್ರಯಾಣಿಸಲು ವಯಸ್ಕರಿಗೆ ಬೆಂಗಳೂರಿಂದ 1,600 ರೂಪಾಯಿ ದರ ನಿಗದಿ ಮಾಡಲಾಗಿದೆ. ಈಗಾಗಲೇ ಟಿಕೆಟ್‌ ಬುಕ್ಕಿಂಗ್‌ ಆರಂಭವಾಗಿದೆ. ಶಬರಿಮಲೆಗೆ ಪ್ರಯಾಣ ಬಯಸುವವರು ಕೆಎಸ್‌ಆರ್​ಟಿಸಿ ಅಧಿಕೃತ ವೆಬ್​ಸೈಟ್ ಮೂಲಕ ಅಥವಾ ರಾಜ್ಯದ ಪ್ರಮುಖ ಬಸ್ ಡಿಪೋಗಳಲ್ಲಿ ಕಾರ್ಯನಿರ್ವಹಿಸುವ ಕೆಎಸ್‌ಆರ್‌ಟಿಸಿ ಟಿಕೆಟ್ ಕೌಂಟರ್‌ಗಳಲ್ಲಿ ಟಿಕೆಟ್ ಬುಕ್ಕಿಂಗ್‌​ ಮಾಡಿಕೊಳ್ಳಬಹುದಾಗಿದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ