ಸೈಬರ್ ಅಪರಾಧ ವಿಭಾಗಕ್ಕೆ ಎಸಿಪಿ ದರ್ಜೆಯ ಅಧಿಕಾರಿಯ ನಿಯೋಜನೆ ಸೇರಿ ಏಳು ಡಿವೈಎಸ್ಪಿ ಮತ್ತು 14 ಮಂದಿ ಇನ್ಸ್ಪೆಕ್ಟರ್ಗಳನ್ನು ಸರ್ಕಾರ ವರ್ಗಾಯಿಸಿದೆ.
ಬೆಂಗಳೂರು: ರಾಜಧಾನಿಯಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಹತ್ತಿಕ್ಕಲು ಇದೇ ಮೊದಲ ಬಾರಿಗೆ ಸಿಸಿಬಿಯ ಸೈಬರ್ ವಿಭಾಗಕ್ಕೆ ಸಹಾಯಕ ಪೊಲೀಸ್ ಕಮೀಷನರ್ (ಎಸಿಪಿ) ದರ್ಜೆಯ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.
ಸತ್ಯನಾರಾಯಣ್ ಸಿಂಗ್ ಅವರು ಎಸಿಪಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕುರಿತು ರಾಜ್ಯ ಪೊಲೀಸ್ ಇಲಾಖೆ ಆದೇಶಿಸಿದೆ.
ಇನ್ನುಳಿದಂತೆ ಒಟ್ಟು ಏಳು ಡಿವೈಎಸ್ಪಿ ಹಾಗೂ 14 ಮಂದಿ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಲಾಗಿದೆ