ಗೋಪೂಜೆಯಲ್ಲಿ ಬಂಗಾರದ ಸರ ನುಂಗಿದ್ದ ಹಸು: ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದ ಪಶುವೈದ್ಯರು

Spread the love

ಶಿವಮೊಗ್ಗ: ಗೋಪೂಜೆ ಸಲ್ಲಿಸುವ ಸಮಯದಲ್ಲಿ ಹಸುವೊಂದು‌ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ್ದ ಘಟನೆ ಹೊಸನಗರ ತಾಲೂಕು ಮತ್ತಿಮನೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇದೀಗ ಪಶುವೈದ್ಯರು ಹಸುವಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಆ ಚಿನ್ನದ ಸರವನ್ನು ಹೊರತೆಗೆದಿದ್ದಾರೆ. ಮತ್ತಿಮನೆ ಸತ್ಯವತಿ ಶ್ಯಾಮ ಉಡುಪ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

ಗೋಪೂಜೆಯ ನಂತರ ಇಟ್ಟಿದ್ದ ಸರ ನಾಪತ್ತೆಯಾದಾಗ ಕುಟುಂಬದವರು ದಿಗಿಲುಗೊಂಡಿದ್ದರು. ನಂತರ ಪರಿಶೀಲಿಸಿದಾಗ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಮನೆಯವರು ಖಚಿತ ಪಡಿಸಿಕೊಂಡಿದ್ದಾರೆ. ಬಂಗಾರ ಹೋದರೆ ಹೋಗಲಿ ಎಂದು ಸತ್ಯವತಿ ಶ್ಯಾಮ ಉಡುಪ ಸುಮ್ಮನಾಗಿದ್ದರು. ಆದರೆ ಹಲವರ ಬಳಿ ಈ ವಿಚಾರ ಹೇಳಿದಾಗ ಇದು ಹಸುವಿನ ಪ್ರಾಣಕ್ಕೂ ಕುತ್ತು ತರಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದು ಅವರ ಆತಂಕಕ್ಕೆ ಕಾರಣವಾಗಿತ್ತು.

ಅಲ್ಲದೇ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಹಸುವಿನ ಆರೋಗ್ಯದ ಸ್ಥಿತಿಯ ಬಗ್ಗೆ ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿ ಡಾ. ಆನಂದ್​ ಜಿ ಅವರಿಗೆ ಮಾಹಿತಿ ನೀಡಿದ್ದರು. ವೈದ್ಯರು ಭಾನುವಾರ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ‌ ಬಂಗಾರದ ಸರವನ್ನು ಹೊರತೆಗೆದಿದ್ದಾರೆ. ಹಸು ಆರೋಗ್ಯವಾಗಿದ್ದು, ಮನೆಯವರು ನಿಟ್ಟುಸಿರು ಬಿಟ್ಟಿದ್ದಾರೆ.

ಡಾ. ಆನಂದ್ ಈ ಬಗ್ಗೆ ಮಾಹಿತಿ ನೀಡಿ, ಹಸು‌ ಮೆಲುಕು‌ ಹಾಕಿ ಮೇವು ಜಗಿಯುವಾಗ ಸರ ತುಂಡಾಗಿ ಚೂಪಾಗಿದ್ದು, ರೆಟಿಕ್ಯುಲಮ್ ಭಾಗದಲ್ಲಿ ಸಿಲುಕಿತ್ತು. ಚೂಪಾಗಿದ್ದರಿಂದ ಗಾಯವಾಗಿ ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇತ್ತು. ಯಶಸ್ವಿ ಚಿಕಿತ್ಸೆ ಮೂಲಕ ಸರವನ್ನು ಹೊರತೆಗೆಯಲಾಗಿದೆ ಎಂದು ತಿಳಿಸಿದ್ದಾರೆ. ಕಾರ್ಯಾಚರಣೆ ವೇಳೆ ಮೈತ್ರಿ


Spread the love

About Laxminews 24x7

Check Also

ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಿ- ಕಡಾಡಿ

Spread the love ಬೆಳಗಾವಿ: ‘ಇಂದಿನ ಮಕ್ಕಳು ಮತ್ತು ಯುವಜನರು ವಿದ್ಯಾರ್ಥಿ ಹಂತದಿಂದಲೇ ಕ್ರೀಡಾ ಸಾಮರ್ಥ್ಯ ಬೆಳೆಸಿಕೊಳ್ಳಬೇಕು’ ಎಂದು ರಾಜ್ಯಸಭಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ