Breaking News

ಡಿಕೆಶಿ ವಿರುದ್ಧದ ಸಿಬಿಐ ತನಿಖೆ ವಾಪಸ್‌ : ಹೈ ಕೋರ್ಟ್‌ ಮೆಟ್ಟಿಲೇರಿದ ಯತ್ನಾಳ್

Spread the love

ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ವಾಪಸ್‌ ಪಡೆಯಲು ನಿರ್ಧರಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೈ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ರಾಜ್ಯ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಕಂಡಿಸಿರುವ ಯತ್ನಾಳ್‌ ಹೈ ಕೋರ್ಟ್‌ ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್‌ ನ ವಿಚಾರಣೆಯನ್ನು ನಿಷ್ಪಲಗೊಳಿಸಲು ಯತ್ನಿಸಲಾಗುತ್ತಿದೆ.

ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಈ ಹಂತದಲ್ಲಿ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಕಾನೂನು ಬಾಹೀರವಾಗಿದೆ. ಇದು ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಹೊಂದಿದೆ. ಈ ಮೂಲಕ ಸರ್ಕಾರ ನ್ಯಾಯಾಂಗದ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವ ಯತ್ನ ನಡೆಸಿದೆ. ಹಾಗಾಗಿ ಸರ್ಕಾರದ ಈ ರೀತಿಯ ಕ್ರಮಕ್ಕೆ ಸೀಮಿತವಾಗಿ ಕೋರ್ಟ್‌ ತಮ್ಮ ವಾದವನ್ನು ಆಲಿಸಬೇಕು ಎಂದು ಯತ್ನಾಳ್‌ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ