ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ.
ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷ ಬಿಜೆಪಿ ಸೋಮವಾರ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ವಿಪಕ್ಷ ನಾಯಕ ಆರ್.ಅಶೋಕ್ ಅವರು, “ಗ್ಯಾರಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ” ಎಂದು ವಾಗ್ದಾಳಿ ನಡೆಸಿದರು
ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದು ಕಿಡಿಕಾರಿದರು.