ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ. ಬೆಳಗಾವಿ: ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳೆರಡರಲ್ಲೂ ಬಿಜೆಪಿ ತನ್ನ ಹಿಡಿತ ಸಾಧಿಸಲು ಸಮರ್ಥವಾಗಿದ್ದರೂ, ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿರುವ ಕಾಂಗ್ರೆಸ್ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಪುಟಿದೇಳಲು ಸಜ್ಜಾಗಿದೆ.
ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಸ್ಥಾನಗಳಲ್ಲಿ ಬಿಜೆಪಿ ಕೇವಲ 7 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರೆ, ಕಾಂಗ್ರೆಸ್ 11 ಸ್ಥಾನಗಳನ್ನು ಗೆದ್ದಿದೆ. ರಾಜ್ಯಾದ್ಯಂತ ಮತ್ತು ಬೆಳಗಾವಿಯಲ್ಲಿ ಕಾಂಗ್ರೆಸ್ ಜನಪ್ರಿಯತೆಯನ್ನು ಗಳಿಸುತ್ತಿರುವ ರೀತಿಯನ್ನು ನೋಡಿದರೆ, 2024ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆಗಳು ನಿಚ್ಛಳವಾಗಿದೆ ಎನ್ನಬಹುದು. ಮೂಲಗಳ ಪ್ರಕಾರ, ಎರಡೂ ಲೋಕಸಭಾ ಕ್ಷೇತ್ರಗಳಲ್ಲಿ ಅನುಭವಿ ಮತ್ತು ಜನಪ್ರಿಯ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸಲು ಕಾಂಗ್ರೆಸ್ ಹೈಕಮಾಂಡ್ ಉತ್ಸುಕವಾಗಿದೆ,
ಆದರೆ ರಾಜ್ಯ ನಾಯಕತ್ವದ ಒಂದು ವಿಭಾಗವು ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಲಿಂಗಾಯತ ಮತ್ತು ಕುರುಬ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸೂಚಿಸಿದೆ. ವಿನಯ್ ನಾವಲಗಟ್ಟಿ, ಕಿರಣ್ ಸಾಧುನವರ್, ಅಮರಸಿಂಗ್ ಪಾಟೀಲ್ ಸೇರಿದಂತೆ ಹಲವು ಅಭ್ಯರ್ಥಿಗಳು ಈಗಾಗಲೇ ಬೆಳಗಾವಿ ಸ್ಥಾನಕ್ಕೆ ಪಕ್ಷದ ಟಿಕೆಟ್ಗಾಗಿ ಲಾಬಿ ಆರಂಭಿಸಿದ್ದಾರೆ.
ಹೈಕಮಾಂಡ್ ಸತೀಶ್ ಜಾರಕಿಹೊಳಿ ಅಥವಾ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸಲು ನಿರ್ಧರಿಸಬಹುದು ಎಂದು ಮೂಲಗಳು ತಿಳಿಸಿವೆ.