Breaking News

ನಿಗಮ ಮಂಡಳಿ ನೇಮಕದಲ್ಲಿ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸುವಂತೆ ಮನವಿ : ಸತೀಶ್ ಜಾರಕಿಹೊಳಿ

Spread the love

ನಿಗಮ ಮಂಡಳಿಗೆ ಅಧ್ಯಕ್ಷರ ನೇಮಕ ವಿಚಾರ: ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ, ಡಿಸಿಎಂ ಜಂಟಿಯಾಗಿ ನಿರ್ಧಾರ ಮಾಡುತ್ತಾರೆ. ಹಿರಿಯ ಶಾಸಕರನ್ನು ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ದು, ನಾವು ಹಿರಿಯ ಶಾಸಕರ ಜೊತೆ ಕಾರ್ಯಕರ್ತರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಹೇಳಿದ್ದೇವೆ. ಶೇಕಡಾ 50ರಷ್ಟು ಕಾರ್ಯಕರ್ತರಿಗೆ, ಶೇಕಡಾ 50ರಷ್ಟು ಶಾಸಕರಿಗೆ ನೀಡಲು ಮನವಿ ಮಾಡಿದ್ದೇವೆ. ಕಾರ್ಯಕರ್ತರಿಗೆ ಕೊಟ್ಟರೆ ಒಳ್ಳೆಯದು ಎಂದು ಹೇಳಿದರು.

ಚಿಕ್ಕೋಡಿ: ರಾಜ್ಯ ಸರ್ಕಾರದಹಲವು ಇಲಾಖೆಗಳಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ಆರೋಪ ಮೊದಲಿನಿಂದಲೂ ಇದೆ. ಆದರೆ, ಈ ವರೆಗೆ ಯಾರಿಗೂ ಸಾಬೀತು ಮಾಡಲಿಕ್ಕೆ ಆಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಮಂಗಳವಾರ ಹುಕ್ಕೇರಿ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಸತ್ಯಕ್ಕೆ ದೂರವಾದ ಆರೋಪಗಳು ಕೆಲವರು ಮಾಡುತ್ತಾರೆ. ಆದರೆ ಇದುವರೆಗೂ ಯಾರಿಗೂ ಸಾಬೀತು ಮಾಡಲಿಕ್ಕೆ ಆಗಿಲ್ಲ. ಅವೆಲ್ಲ ಆರೋಪಗಳಷ್ಟೇ, ಏನೇ ಬಂದರೂ ನಮ್ಮ ಸರ್ಕಾರ ಅಭಿವೃದ್ಧಿ ಕಡೆಗೆ ಗಮನ ಕೊಟ್ಟಿದೆ. ನುಡಿದಂತೆ ಅಭಿವೃದ್ಧಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಿಬಿಐ ತನಿಖೆ ಹಿಂಪಡೆಯಲು ಸರ್ಕಾರ ನಿರ್ಧರಿಸಿದ ಕ್ರಮ ಪ್ರಶ್ನಿಸಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೈಕೋರ್ಟ್ ಮೆಟ್ಟಿಲೇರಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕೋರ್ಟ್ ಇದೆಯಲ್ಲ, ಕೋರ್ಟ್‌ಗೆ ಹೋದರೆ ನಾವೇನೂ ಹೇಳಕ್ಕಾಗಲ್ಲ. ಕೋರ್ಟ್ ಡಿಸಿಷನ್ ತಗೋಬೇಕು ಅಷ್ಟೇ, ಕೋರ್ಟ್ ತೀರ್ಪು ಅಂತಿಮ. ಕೋರ್ಟ್ ಮೆಟ್ಟಿಲೇರಿದ ಬಗ್ಗೆ ನಾವು ಏನೂ ಹೇಳಲಿಕ್ಕೆ ಆಗುವುದಿಲ್ಲ ಎಂದು ಸಚಿವ ಜಾರಕಿಹೊಳಿ ಪ್ರತಿಕ್ರಿಯಿಸಿದರು.

ಹುಕ್ಕೇರಿ ಪಟ್ಟಣದಲ್ಲಿ ಕೆಡಿಪಿ ಸಭೆ:ಪ್ರತಿ ಮೂರು ತಿಂಗಳಿಗೊಮ್ಮೆ ತಾಲೂಕು ಕೆಡಿಪಿ ಸಭೆ ಮಾಡುತ್ತೇವೆ. ಬರಗಾಲ ಇದ್ದು ಏನೇನು ಕ್ರಮ ಕೈಗೊಳ್ಳಬೇಕು ಎಂಬುದನ್ನು ಅಧಿಕಾರಿಗಳ ಜೊತೆ ಚರ್ಚೆ ಮಾಡಲಾಗಿದೆ. ಈಗಾಗಲೇ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದು, ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ