Breaking News

ಪಾರ್ಟ್​ಟೈಮ್ ಜಾಬ್ ಕೊಡಿಸುವುದಾಗಿ ಹೇಳಿ ಸಾರ್ವಜನಿಕರನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Spread the love

ಬೆಂಗಳೂರು: ಪಾರ್ಟ್​ಟೈಮ್ ಜಾಬ್ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ಹಂತ ಹಂತವಾಗಿ ಹಣ ಪಡೆದು ವಂಚಿಸುತ್ತಿದ್ದ ಜಾಲ ಬೇಧಿಸಿರುವ ನಗರದ ಈಶಾನ್ಯ ವಿಭಾಗದ ಸೆನ್ ಠಾಣೆ ಪೊಲೀಸರು ನಾಲ್ವರು ಸೈಬರ್ ವಂಚಕರನ್ನು ಬಂಧಿಸಿದ್ದಾರೆ.

ಸೈಯದ್ ಯೂನಸ್, ಮೊಹಮ್ಮದ್ ಕಲೀಮುಲ್ಲಾ, ಸೈಯ್ಯದ್ ಅರ್ಬಾಜ್ ಹಾಗೂ ಇಬ್ರಾಹಿಂ ಕಲೀಂ ಬಂಧಿತ ಆರೋಪಿಗಳು.

ಏನಿದು ಪ್ರಕರಣ?: ವಂಚನೆಗೊಳಗಾದ ಸಾವಂತ್ ಪೂಜಾರಿ ಎಂಬುವರು ಫೇಸ್​ಬುಕ್ ನೋಡುವಾಗ ಆನ್​ಲೈನ್​ ಶಾಪಿಂಗ್​ ಆಯಪ್​ವೊಂದರಲ್ಲಿ ಪಾರ್ಟ್ ಟೈಮ್ ವರ್ಕ್ ಫ್ರಂ ಹೋಮ್ ಕೆಲಸ ಇರುವುದನ್ನು ಗಮನಿಸಿ ಲಿಂಕ್ ಒತ್ತಿದ್ದರು. ಯೂಸರ್ ಐಡಿ, ಪಾರ್ಸ್ ವರ್ಡ್ ರಚಿಸಿಕೊಂಡಿದ್ದಕ್ಕೆ ಅವರಿಗೆ ಬೋನಸ್ ರೂಪದಲ್ಲಿ 100 ರೂ. ಆರೋಪಿಗಳು ಕಳುಹಿಸಿದ್ದರು. ಬಳಿಕ ಟೆಲಿಗ್ರಾಮ್ ಗ್ರೂಪ್ ರಚಿಸಿ ಫ್ಲಿಪ್​ ಕಾರ್ಟ್​ ಮಾಲ್ ಇಂಡಿಯಾದಲ್ಲಿ ಪ್ರಾಡಕ್ಟ್ ಖರೀದಿಸುವಂತೆ ವಿವಿಧ ಟಾಸ್ಕ್ ನೀಡಿದ್ದರು. ಅದೇ ರೀತಿ, 88 ಸಾವಿರ ರೂಪಾಯಿ ಮೌಲ್ಯ ವಸ್ತುಗಳ ಖರೀದಿಗೆ ಪ್ರತಿಯಾಗಿ ಯಾವುದೇ ಹೆಚ್ಚುವರಿ ಹಣ ನೀಡದೇ ಆರೋಪಿಗಳು ವಂಚಿಸಿದ್ದರು.

ಈ ಸಂಬಂಧ ಸಾವಂತ್ ಪೂಜಾರಿ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಇನ್ಸ್​ಪೆಕ್ಟರ್​ ಎಂ.ಮಲ್ಲಿಕಾರ್ಜುನ್ ಹಾಗೂ‌ ಪಿಎಸ್‌ಐ ರಮಣ್ ಗೌಡ ನೇತೃತ್ವದ ತಂಡ, ಕಾರ್ಯಾಚರಣೆ ‌ನಡೆಸಿ ಆರೋಪಿಗಳ 30 ಬ್ಯಾಂಕ್ ಖಾತೆಗಳನ್ನು ವಶಕ್ಕೆ ಪಡೆದು, ಅದರಲ್ಲಿದ್ದ 60 ಲಕ್ಷ ರೂಗಳನ್ನು ಸೀಜ್ ಮಾಡಿ, ಕೃತ್ಯಕ್ಕೆ ಬಳಸಿದ್ದ ನಾಲ್ಕು ಮೊಬೈಲ್, ಎರಡು ಬ್ಯಾಂಕ್ ಪಾಸ್ ಬುಕ್ ವಶಕ್ಕೆ ಪಡೆದಿದ್ದರು. ಪ್ರಕರಣದ ಮೊದಲ ಆರೋಪಿ ಹುಸೇನ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಆರೋಪಿಗಳು ಅಮಾಯಕರ ಹೆಸರಿನಲ್ಲಿ ಬ್ಯಾಂಕ್ ಖಾತೆ ಸೃಷ್ಟಿಸಿ ಸೈಬರ್ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದರು.

ಜಪ್ತಿಯಾದ ಬ್ಯಾಂಕ್ ಖಾತೆಯಲ್ಲಿ ಇದುವರೆಗೂ 40 ಕೋಟಿ ರೂ. ವಹಿವಾಟು ನಡೆದಿದೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಆರೋಪಿತರ ಬ್ಯಾಂಕ್ ಖಾತೆಯಲ್ಲಿದ್ದ 60 ಲಕ್ಷ ಮಾತ್ರ ಸೀಜ್ ಮಾಡಲಾಗಿದ್ದು, ಇನ್ನುಳಿದ ಹಣದ ಬಗ್ಗೆ ಆರೋಪಿಗಳು ಬಾಯಿ ಬಿಡಬೇಕಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ