Breaking News

ಮತ್ತೊಮ್ಮೆ ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್​ ದ್ರಾವಿಡ್

Spread the love

ನವದೆಹಲಿ: ಭಾರತ ಕ್ರಿಕೆಟ್​ ನಿಯಂತ್ರಣ ಮಂಡಳಿ (BCCI) ಮತ್ತೊಮ್ಮೆ ಟೀಮ್​ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್​ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ.

ಆದರೆ ಎಷ್ಟು ಅವಧಿ ವರೆಗೆ ಈ ಹುದ್ಧೆಯಲ್ಲಿ ಮುಂದುವರೆಯಲಿದ್ದಾರೆ ಎಂಬುದರ ಕುರಿತು ಬಿಸಿಸಿಐ ಬಹಿರಂಗ ಪಡಿಸಿಲ್ಲವಾದರೂ, 2024ರ ಜೂನ್​ನಲ್ಲಿ ನಡೆಯಲಿರುವ ಟಿ-20 ವಿಶ್ವಕಪ್​​ ವರೆಗೆ ಮುಂದುವರೆಯಲಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಕಳೆದ 2021ರ ನವೆಂಬರ್​ ತಿಂಗಳಲ್ಲಿ ದ್ರಾವಿಡ್​ ಅವರನ್ನು ಟೀಮ್​ ಇಂಡಿಯಾದ ಮುಖ್ಯ ಕೋಚ್​ ಆಗಿ 2 ವರ್ಷದ ಅವಧಿಗೆ ಬಿಸಿಸಿಐ ನೇಮಕ ಮಾಡಿತ್ತು. ಇತ್ತೀಚೆಗೆ ಮುಕ್ತಾಯಗೊಂಡ 2023ರ ಏಕದಿನ (ODI) ವಿಶ್ವಕಪ್​ (World Cup) ನಂತರ ಮುಖ್ಯ ಕೋಚ್​ ಹುದ್ದೆಯ ಅವಧಿ ಪೂರ್ಣಗೊಂಡಿತ್ತು. ಅದಾದ ಬಳಿಕ ಈ ಹುದ್ದೆಗೆ ಯಾರನ್ನು ನೇಮಕ ಮಾಡಲಾಗುತ್ತದೆ ಎಂಬ ಊಹಪೋಹಗಳಿಗೆ ತೆರೆ ಬಿದ್ದಿದೆ.

ಈ ಬಗ್ಗೆ ಬಿಸಿಸಿಐ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, “ಇತ್ತೀಚೆಗೆ ಮುಕ್ತಾಯಗೊಂಡ ODI ವಿಶ್ವಕಪ್ ನಂತರ ದ್ರಾವಿಡ್​ ಅವರ ಮುಖ್ಯ ಕೋಚ್ ಹುದ್ದೆಯ ಒಪ್ಪಂದದ ಅವಧಿ ಪೂರ್ಣಗೊಂಡಿತ್ತು. ಇದಾದ ಬಳಿಕ ಈ ಹುದ್ದೆಗೆ ಯಾರನ್ನು ನೇಮಕ ಮಾಡಬೇಕು ಎಂದು ಚರ್ಚೆ ನಡೆಸಲಾಗಿತ್ತು. ಎಲ್ಲರ ಒಪ್ಪಿಗೆ ಪಡೆದು ನಂತರ ರಾಹುಲ್​ ದ್ರಾವಿಡ್​ ಅವರನ್ನೇ ಮುಖ್ಯ ಕೋಚ್​ ಆಗಿ ಒಪ್ಪಂದವನ್ನು ವಿಸ್ತರಿಸಲು ನಿರ್ಧರಿಸಲಾಯಿತು. ಈ ಒಪ್ಪಂದವನ್ನು ದ್ರಾವಿಡ್ ಅವರು ಒಪ್ಪಿದ್ದಕ್ಕಾಗಿ ಸಂತಸ ತಂದಿದೆ. ​ಅವರ ಮಾರ್ಗದರ್ಶನದಲ್ಲಿ ಟೀಮ್​ ಇಂಡಿಯಾ ಮತ್ತಷ್ಟು ಉನ್ನತ ಸ್ಥಾನಕ್ಕೆ ಏರುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ​ ಹೇಳಿದ್ದಾರೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ