Breaking News
Home / ರಾಜಕೀಯ / ತೆಲಂಗಾಣ ವಿಧಾನಸಭೆಗೆ ಇಂದು ರಾಜ್ಯಾದ್ಯಂತ ಮತದಾನ ಆರಂಭ

ತೆಲಂಗಾಣ ವಿಧಾನಸಭೆಗೆ ಇಂದು ರಾಜ್ಯಾದ್ಯಂತ ಮತದಾನ ಆರಂಭ

Spread the love

ಹೈದರಾಬಾದ್: ತೆಲಂಗಾಣದ ಎಲ್ಲ 119 ವಿಧಾನಸಭಾ ಕ್ಷೇತ್ರಗಳಿಗೆ ಸದಸ್ಯರನ್ನು ಆಯ್ಕೆ ಮಾಡಲು ಇಂದು ಮತದಾನ ನಡೆಯುತ್ತಿದೆ. ಪೊಲೀಸ್ ಭದ್ರತೆಯ ನಡುವೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆಯಿಂದಲೇ ಮತದಾರರು ಮತಗಟ್ಟೆ ಸಮೀಪ ಸರತಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿತ್ತು. ಒಟ್ಟು 35,655 ಮತಗಟ್ಟೆಗಳಲ್ಲಿ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಯಿತು ಎಂದು ಚು.ಅಧಿಕಾರಿಗಳು ತಿಳಿಸಿದ್ದಾರೆ.

 

  •  

106 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಈ ಪೈಕಿ 13 ನಕ್ಸಲ್‌ಪೀಡಿತ ಕ್ಷೇತ್ರಗಳಲ್ಲಿ ಸಂಜೆ 4 ಕ್ಕೆ ಮತದಾನ ಮುಕ್ತಾಯವಾಗಲಿದೆ. ರಾಜ್ಯದಲ್ಲಿ 1,63,13,268 ಪುರುಷ ಮತದಾರರು ಮತ್ತು 1,63,02,261 ಮಹಿಳಾ ಮತದಾರರು ಸೇರಿದಂತೆ ಒಟ್ಟು 3.26 ಕೋಟಿ ಅರ್ಹ ಮತದಾರರಿದ್ದಾರೆ.

 

  •  

ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಪುತ್ರ ಹಾಗು ಸಚಿವ ಕೆ.ಟಿ.ರಾಮರಾವ್, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್ ರೆಡ್ಡಿ ಮತ್ತು ಬಿಜೆಪಿ ಲೋಕಸಭಾ ಸದಸ್ಯರಾದ ಬಂಡಿ ಸಂಜಯ್ ಕುಮಾರ್ ಮತ್ತು ಡಿ.ಅರವಿಂದ್ ಸೇರಿದಂತೆ 2,290 ಸ್ಪರ್ಧಿಗಳು ಕಣದಲ್ಲಿದ್ದಾರೆ. ಅಕ್ಟೋಬರ್ 9ರಂದು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರ ರಾಜ್ಯದಲ್ಲಿ ಮಾದರಿ ನೀತಿಸಂಹಿತೆ ಜಾರಿಯಲ್ಲಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ