Breaking News

60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ‌ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ

Spread the love

ಬೆಳಗಾವಿ: ಪಹಣಿ ಪತ್ರದಲ್ಲಿ ತಿದ್ದುಪಡಿ ಮಾಡಲು 60 ಸಾವಿರ ಲಂಚ ಪಡೆಯುವಾಗ ಬೈಲಹೊಂಗಲ ಉಪವಿಭಾಗ ಕಚೇರಿಯ ಎಸ್‌ಡಿಸಿ‌ ಮಂಜನಾಥ ಅಂಗಡಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಪಹಣಿ ಪತ್ರದ ತಿದ್ದುಪಡಿಗೆ ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ರಾಮದುರ್ಗ ತಾಲೂಕಿನ ಚಿಕ್ಕೊಪ್ಪ ಎಸ್‌ಕೆ ಗ್ರಾಮದ ರವಿ ಅಜ್ಜಿ, ಪಹಣಿ ಪತ್ರ ತಿದ್ದುಪಡಿಗೆ ಅರ್ಜಿ ಸಲ್ಲಿಸಿದ್ದರು.

ಪಹಣಿ ಪತ್ರ ತಿದ್ದುಪಡಿ ಮಾಡಲು ಮಂಜುನಾಥ 60 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಬೆಳಗಾವಿ ಲೋಕಾಯುಕ್ತ ಠಾಣೆಗೆ ರವಿ ಅಜ್ಜಿ ದೂರು ನೀಡಿದ್ದರು. ದೂರಿನ ಹಿನ್ನಲೆಯಲ್ಲಿ ಲೋಕಾಯುಕ್ತ ಎಸ್ಪಿ ಹಣಮತರಾಯ, ಡಿವೈಎಸ್‌ಪಿ ಬಿ.ಎಸ್. ಪಾಟೀಲ ಮಾರ್ಗದರ್ಶನದಲ್ಲಿ ಪಿಎಸ್‌ಐ ಅನ್ನಪೂರ್ಣ ಹುಲಗೂರ ನೇತೃತ್ವದ ತಂಡದಿಂದ ದಾಳಿ ನಡೆಸಿ ಮಂಜುನಾಥ ಅವರನ್ನು ಬಲೆಗೆ ಬೀಳಿಸಿದೆ


Spread the love

About Laxminews 24x7

Check Also

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Spread the loveಶ್ರೀನಗರ: ಇರಾನ್‌ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ  ಹತ್ಯೆ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ