Breaking News

ಆಸ್ತಿ ವಿವರ ಸಲ್ಲಿಸದ ಜನಪ್ರತಿನಿಧಿಗಳು: ಪತ್ರಿಕಾ ಪ್ರಕಟಣೆ ಹೊರಡಿಸಿದ ಲೋಕಾಯುಕ್ತ

Spread the love

ಬೆಂಗಳೂರು: ಲೋಕಾಯುಕ್ತ ಇಲಾಖೆ ಆಸ್ತಿ ವಿವರ ಸಲ್ಲಿಸದೇ ಇರುವ ಜನಪ್ರತಿನಿಧಿಗಳಿಗೆ ಆಸ್ತಿ ವಿವರ ದಾಖಲಿಸುವಂತೆ ಜನಪ್ರತಿನಿಧಿಗಳ ಹೆಸರು ಸಮೇತ ದಿನಪತ್ರಿಕೆಗಳಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

2020-22ರ ಸಾಲಿನಲ್ಲಿ ಆಸ್ತಿ ವಿವರ ಸಲ್ಲಿಸದೆ ಜನಪ್ರತಿನಿಧಿಗಳು ಲೋಪವೆಸಗಿದ್ದಾರೆ. ಹಲವು ಬಾರಿ ಆಸ್ತಿ ವಿವರ ಸಲ್ಲಿಸುವಂತೆ ಕಾಲಾವಕಾಶ ನೀಡಿದರೂ ಶಾಸಕ-ಸಚಿವರು ಮಾತ್ರ ಆಸ್ತಿ ಘೋಷಣೆ ವಿವರ ಸಲ್ಲಿಸಿಲ್ಲ. ಹೀಗಾಗಿ ಕಾನೂನು ಪ್ರಕಾರ ದಿನಪತ್ರಿಕೆಗಳಲ್ಲಿ 81 ಮಂದಿ ಜನಪ್ರತಿನಿಧಿಗಳ ಹೆಸರುಗಳ ಸಮೇತ ಪತ್ರಿಕಾ ಪ್ರಕಟಣೆ ಹೊರಡಿಸಿದೆ‌.

ಜೂನ್ 30 ರೊಳಗೆ ಪ್ರತಿ ವರ್ಷ ಎಲ್ಲ ಜನಪ್ರತಿನಿಧಿಗಳಿಗೂ ಆಸ್ತಿ ವಿವರ ಸಲ್ಲಿಸುವಂತೆ ಸೂಚಿದರೂ, ಈ ಬಗ್ಗೆ ಸೊಪ್ಪು ಹಾಕಿರಲಿಲ್ಲ. ಹೀಗಾಗಿ ಕಳೆದ ಬಾರಿ ಸಚಿವರಾಗಿದ್ದ ಬಿ ಶ್ರೀರಾಮುಲು, ಕೆ.ಸಿ ನಾರಾಯಣಗೌಡ, ಎಸ್. ಅಂಗಾರ ಆಸ್ತಿ ವಿವರ ಸಲ್ಲಿಸದೇ ಲೋಪವೆಸಗಿದ್ದಾರೆ. ಈ ಬಾರಿ ಸಚಿವರಾದ ರಹೀಂ ಖಾನ್, ಕೆ.ಎನ್ ರಾಜಣ್ಣ, ಜಮೀರ್ ಅಹಮ್ಮದ್ ಖಾನ್, ರಾಮಲಿಂಗ ರೆಡ್ಡಿ, ಕೆ.ಎಚ್ ಮುನಿಯಪ್ಪ ಅವರೂ ಆಸ್ತಿ ವಿವರ ಸಲ್ಲಿಸಿಲ್ಲ. ಕಳೆದ ವಿಧಾನಸಭೆ ಅವಧಿಯ 81 ಮಂದಿ ಶಾಸಕರು ಆಸ್ತಿ ವಿವರ ಸಲ್ಲಿಸಿರಲಿಲ್ಲ. ಈ ಬಾರಿಯ ವಿಧಾನಸಭೆ ಅವಧಿಯ 51 ಮಂದಿ ಶಾಸಕರು ಆಸ್ತಿ ವಿವರ ಸಲ್ಲಿಸಿಲ್ಲ.‌ ಆಸ್ತಿ ವಿವರ ಸಲ್ಲಿಸದ ಶಾಸಕರು, ಸಚಿವರಿಗೆ ಲೋಕಾಯುಕ್ತರು ನೋಟಿಸ್ ನೀಡಿದ್ದಾರೆ.


Spread the love

About Laxminews 24x7

Check Also

ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ*

Spread the loveಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ* ರಾಜ್ಯ ಸರ್ಕಾರ ಕಬ್ಬಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ