Breaking News

ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿಪೊಲೀಸರ ವಶಕ್ಕೆ

Spread the love

ಚಿತ್ರದುರ್ಗ: ಇನ್ನೋವಾ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 8 ಕೋಟಿ ರೂಪಾಯಿ ನಗದನ್ನು ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಿತ್ರದುರ್ಗದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರನ್ನು ಮಲ್ಲಾಡಿಹಳ್ಳಿ ಸಮೀಪ ಪರಿಶೀಲಿಸಿದಾಗ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ.

ಕಾರು ಚಾಲಕ ಸಚಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದು ಚಿತ್ರದುರ್ಗದ ಅಡಿಕೆ ವರ್ತಕರೊಬ್ಬರ ಹಣವಾಗಿದ್ದು, ಶಿವಮೊಗ್ಗದ ಇನ್ನೋರ್ವ ಅಡಿಕೆ ವರ್ತಕರಿಗೆ ನೀಡಲು ಹೊರಟಿದ್ದಾಗಿ ಎಂದು ಚಾಲಕ ಪೊಲೀಸರಿಗೆ ತಿಳಿಸಿದ್ದಾರೆ. ಹಣದ ಬಗ್ಗೆ ಸೂಕ್ತ ದಾಖಲೆಗಳಿಲ್ಲದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

“ಸೂಕ್ತ ದಾಖಲೆಗಳು ಇಲ್ಲದ ಕಾರಣ ಪರಿಶೀಲನೆ ನಡೆಸುತ್ತಿದ್ದೇವೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಐಟಿ ವಿಚಾರಣೆಯ ಬಳಿಕ ಈ ಹಣ ಯಾರಿಗೆ ಸೇರಿದ್ದು ಎಂಬುದು ಖಚಿತವಾಗಲಿದೆ” ಎಂದು ಚಿತ್ರದುರ್ಗ ಎಸ್​ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದರು.

ಹೊಳಲ್ಕೆರೆ ಠಾಣೆಯಲ್ಲಿ ಎಣಿಕೆ ಯಂತ್ರ ಕೈಕೊಟ್ಟ ಹಿನ್ನೆಲೆಯಲ್ಲಿ ಪೊಲೀಸರೇ ಹಣ ಎಣಿಕೆ ಕಾರ್ಯದಲ್ಲಿ ನಿರತರಾಗಿದ್ದಾರೆ.


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ