Breaking News

ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಅಧಿವೇಶನದಲ್ಲಿ ಮಾಡುತ್ತೇವೆ: ವಿಜಯೇಂದ್ರ

Spread the love

ದಾವಣಗೆರೆ: ರಾಜ್ಯ ಕಾಂಗ್ರೆಸ್​ ಸರ್ಕಾರ ರೈತರು ಮತ್ತು ಬಡವರ ವಿರೋಧಿಯಾಗಿದೆ. ಈ ಎಲ್ಲಾ ವಿಚಾರಗಳನ್ನು ಅಧಿವೇಶನದಲ್ಲಿ ಮುಂದಿಟ್ಟು ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಗ್ರಾಮಕ್ಕೆ ಇಂದು ಆಗಮಿಸಿದ ವಿಜಯೇಂದ್ರ ಅವರಿಗೆ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು.‌ ಬೃಹತ್ ಆಕಾರದ ಹೂವಿನ ಹಾರ ಹಾಕಿ, ಘೋಷಣೆಗಳನ್ನು ಕೂಗಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕಬ್ಬಿನ ಬೆಳೆಗಾರರ ಕೂಗಿಗೆ ಈ ಸರ್ಕಾರ ಕಿವಿ ಕೊಡ್ತಿಲ್ಲ, ಅದೇ ರೀತಿ ಉತ್ತರ ಕರ್ನಾಟಕದ‌ ಅಭಿವೃದ್ಧಿಯನ್ನು ಮರೆತಿದೆ. ಶಾಸಕರಿಗೆ ಬಿಡುಗಡೆ ಆಗಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ, ಇಲ್ಲಿಯತನಕ ಒಂದು ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮೇಲ್ನೋಟಕ್ಕೆ ಇದು ರೈತ ವಿರೋಧಿ, ಬಡವರ ವಿರೋಧಿ ಸರ್ಕಾರ ಎಂದು ಗೊತ್ತಾಗುತ್ತಿದೆ ಎಂದರು.

 


Spread the love

About Laxminews 24x7

Check Also

ಬಿಡಿಸಿಸಿ ಬ್ಯಾಂಕಿನ‌ ಚುನಾವಣೆ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ ಸಂಬಂಧ ಅಲ್ಲಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.

Spread the loveಬೆಳಗಾವಿ- ಬಿಡಿಸಿಸಿ ಬ್ಯಾಂಕಿನ‌ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಅವಿರೋಧ ಆಯ್ಕೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ