Breaking News

FDA ಪರೀಕ್ಷಾ ಅಕ್ರಮ: ಕಲಬುರಗಿಯಲ್ಲಿ ಇಬ್ಬರು ಪ್ರಾಂಶುಪಾಲರ ಬಂಧನ

Spread the love

ಕಲಬುರಗಿ: ಅಕ್ಟೋಬರ್​​​ 28ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ ಎಫ್‌ಡಿಎ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಬೇಟೆ ಮುಂದುವರೆಸಿದ್ದು, ಬುಧವಾರ ಇಬ್ಬರು ಪ್ರಾಂಶುಪಾಲರನ್ನು ಬಂಧಿಸಿದ್ದಾರೆ.

ಅಫಜಲಪುರ ತಾಲೂಕಿನ ಕರಜಗಿ ಗ್ರಾಮದ ಸರ್ಕಾರಿ ಪಿಯು ಕಾಲೇಜು ಪ್ರಾಂಶುಪಾಲ ಚಂದ್ರಕಾಂತ್​ ಬುರಕಲ್​ ಮತ್ತು ಅಫಜಲಪುರ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಸಣ್ಣ ಪೂಜಾರಿ ಬಂಧಿತರು.

ರಾಯಲ್​ ಪಬ್ಲಿಕ್​ ಶಾಲೆಯ ಕೆಇಎ ಪರೀಕ್ಷಾ ಕೇಂದ್ರದ ಮುಖ್ಯಸ್ಥರಾಗಿದ್ದ ಚಂದ್ರಕಾಂತ್, ಅಧಿಕೃತ ಅಭ್ಯರ್ಥಿಗಳ ಬದಲು ಬೇರೆಯವರಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದ್ದರು. ಬಸಣ್ಣ ಪೂಜಾರಿ ಪರೀಕ್ಷೆಯ ಕಸ್ಟೋಡಿಯನ್ ಆಗಿದ್ದರು. ಈ ಇಬ್ಬರು ಪ್ರಶ್ನೆ ಪತ್ರಿಕೆಯನ್ನೂ ಸೋರಿಕೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿದ್ದಾರೆ.

ಈಗಾಗಲೇ ಬಂಧಿತ ಆರೋಪಿಗಳು ನೀಡಿದ ಸುಳಿವಿ‌ನ ಆಧಾರದಲ್ಲಿ ಕಳೆದ ಕೆಲ ದಿ‌ನಗಳ ಹಿಂದೆ ಈ ಇಬ್ಬರನ್ನು ಸಿಐಡಿ ಅಧಿಕಾರಿಗಳು ಕರೆಯಿಸಿ ತೀವ್ರ ವಿಚಾರಣೆ ನಡೆಸಿ ಬಿಟ್ಟು ಕಳುಹಿಸಿದ್ದರು. ಆ ಬಳಿಕ ಇದೀಗ ಬಂಧಿಸಿ ಕಲಬುರಗಿ ಜೆಎಮ್‌ಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.


Spread the love

About Laxminews 24x7

Check Also

ಹಾವೇರಿ: ಶರಣ ಚೌಡಯ್ಯ ಐಕ್ಯ ಮಂಟಪಕ್ಕೆ ಜಲದಿಗ್ಬಂಧನ, ತೆಪ್ಪದಲ್ಲಿ ತೆರಳಿ ಭಕ್ತರಿಂದ ಪೂಜೆ

Spread the loveಹಾವೇರಿ: ಸಂತರ, ಶರಣರ ಮತ್ತು ದಾರ್ಶನಿಕರ ಜಿಲ್ಲೆ ಹಾವೇರಿ. ಇಲ್ಲಿ ಸರ್ವಜ್ಞ, ಅಂಬಿಗರ ಚೌಡಯ್ಯ, ಕನಕದಾಸರು, ಶಿಶುನಾಳ ಶರೀಫರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ