Breaking News

ಭ್ರೂಣ ಹತ್ಯೆ ಮಾಡಿದವರು ಜೊತೆಗೆ ಭ್ರೂಣ ಹತ್ಯೆಗೆ ಮಾಡಿಸಿಕೊಂಡವರು ಕಠಿಣ ಶಿಕ್ಷೆ ಆಗಬೇಕು : ಸಚಿವ ವೆಂಕಟೇಶ್

Spread the love

ಚಾಮರಾಜನಗರ : ಭ್ರೂಣ ಹತ್ಯೆಯಂತಹ ದ್ರೋಹದ ಕೆಲಸ ಮತ್ತೊಂದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅವರು ಹೇಳಿದರು.

ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಭ್ರೂಣ ಹತ್ಯೆ ಮಾಡಿದವರ ಜೊತೆಗೆ ಭ್ರೂಣ ಹತ್ಯೆಗೆ ಒಳಗಾದವರಿಗೂ ಕಠಿಣ ಶಿಕ್ಷೆ ಆಗಬೇಕು. ಆಗ ಮಾತ್ರ ಈ ರೀತಿ ಪಾಪದ ಕೃತ್ಯ ನಿಲ್ಲಲ್ಲಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಸರ್ಕಾರ ಹಲವು ಕ್ರಮ ತೆಗೆದುಕೊಂಡಿದೆ ಎಂದರು.

ಇನ್ನು ಚೀನಾದಲ್ಲಿ ನ್ಯುಮೋನಿಯಾ ಸೋಂಕು ಹೆಚ್ಚಳವಾದ ಸಂಬಂಧ ರಾಜ್ಯವು ಕೂಡ ಎಚ್ಚೆತ್ತುಕೊಂಡಿದೆ. ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಚೆಕ್ ಪೋಸ್ಟ್​ಗಳಲ್ಲಿ ತಪಾಸಣೆ, ವಿಶೇಷ ವಾರ್ಡ್​ಗಳನ್ನು ರೂಪಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಜಾತಿ ಗಣತಿ ವರದಿ ಬಿಡುಗಡೆಯಾದ ಬಳಿಕ ಸರ್ಕಾರ ಪತನ ಆಗುತ್ತದೆ ಹಾಗೂ ಲೋಕಸಭಾ ಚುನಾವಣೆಗೂ ಮುನ್ನ ಡಿಕೆಶಿ ಜೈಲಿಗೆ ಹೋಗುತ್ತಾರೆ ಎಂಬ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಟೀಕೆಗೆ ಉತ್ತರಿಸಿ, ಈಶ್ವರಪ್ಪ ಮನಸ್ಸಿಗೆ ಬಂದಂತೆ ಏನೇನೋ ಮಾತನಾಡುತ್ತಾರೆ. ಅವರ ಹೇಳಿಕೆ ನಮ್ಮ ಅಧ್ಯಕ್ಷರನ್ನ ಉದ್ದೇಶಪೂರ್ವಕವಾಗಿ ಜೈಲಿಗೆ ಹಾಕಿಸುವ ಹುನ್ನಾರದಂತಿದೆ. ಈಶ್ವರಪ್ಪ ಅವರ ಹೇಳಿಕೆ ಹಿಂದೆ ಷಡ್ಯಂತ್ರ ಅಡಗಿದೆ. ಯಾರು ಏನೇ ಅಂದರೂ ಸರ್ಕಾರ ಐದು ವರ್ಷ ಸುಭದ್ರವಾಗಿರಲಿದೆ ಎಂದರು.

ಇನ್ನು ಸುರ್ಜೇವಾಲ ರಾಜ್ಯಕ್ಕೆ ವಸೂಲಿಗೆ ಬರುತ್ತಾರೆ ಎಂಬ ಬಿಜೆಪಿಯವರ ಆರೋಪದ ಬಗ್ಗೆ ಮಾತನಾಡಿ, ಸುರ್ಜೇವಾಲ ರಾಜ್ಯದ ಉಸ್ತುವಾರಿ ಆಗಿದ್ದಾರೆ. ಅವರು ಫ್ಲೈಟಲ್ಲಿ ದುಡ್ಡು ಹಿಡಿದುಕೊಂಡು ಹೋಗಲು ಆಗುತ್ತಾ?. ಬಿಜೆಪಿಯವರ ಆಪಾದನೆಗಳಿಗೆ ಅರ್ಥವಿಲ್ಲ ಎಂದು ಕಿಡಿಕಾರಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ