Breaking News

ಯಾವುದನ್ನೂ ಉಚಿತವಾಗಿ ನೀಡಬಾರದು: ನಾರಾಯಣ ಮೂರ್ತಿ

Spread the love

ಬೆಂಗಳೂರು: ”ಯಾವುದನ್ನೂ ಉಚಿತವಾಗಿ ನೀಡಬಾರದು. ಸರ್ಕಾರದಿಂದ ಒದಗಿಸುವ ಸೇವೆಗಳು ಮತ್ತು ಸಬ್ಸಿಡಿಗಳನ್ನು ಪಡೆಯುವ ಜನರು ಸಮಾಜದ ಒಳಿತಿಗಾಗಿ ಮತ್ತೆ ಕೊಡುಗೆ ನೀಡಬೇಕು” ಎಂದು ಇನ್ಫೋಸಿಸ್ ಸಹಸಂಸ್ಥಾಪಕರಾದ ನಾರಾಯಣ ಮೂರ್ತಿ ಸಲಹೆ ನೀಡಿದ್ದಾರೆ.

 

ಬೆಂಗಳೂರು ಟೆಕ್ ಸಮ್ಮಿಟ್ 2023ರ 26ನೇ ಆವೃತ್ತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ”ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಶೇಕಡಾ 20ಕ್ಕೆ ತಲುಪಿದರೆ, ನಾವು ನಿಮಗೆ ಉಚಿತ ಸೌಲಭ್ಯಗಳನ್ನು ಒದಗಿಸುತ್ತೇವೆ ಎಂದು ನೀವು ಹೇಳಬೇಕು. ಇದರಿಂದ ಸರಕಾರಕ್ಕೆ ತುಂಬಾ ಒಳ್ಳೆಯದಾಗುತ್ತದೆ. ಉಚಿತ ಸೇವೆ ಒದಗಿಸುವುದನ್ನು ನಾನು ವಿರೋಧಿಸುವುದಿಲ್ಲ. ನಾನೂ ಕೂಡ ಬಡ ಹಿನ್ನೆಲೆಯಿಂದ ಬಂದವನು. ಹಾಗಾಗಿ ಜನರ ಪರಿಸ್ಥಿತಿಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದೇನೆ. ಉಚಿತ ಸೌಲಭ್ಯಗಳ ಪ್ರಯೋಜನವನ್ನು ಪಡೆಯುವ ಜನರು ತಮ್ಮ ಭವಿಷ್ಯದ ಕಲ್ಯಾಣಕ್ಕೆ ಪ್ರತಿಯಾಗಿ ಸಮಾಜಕ್ಕೂ ಏನಾದರೂ ಕೊಡುಗೆ ನೀಡಬೇಕು ಎಂಬುದು ನನ್ನ ಭಾವನೆ” ಎಂದರು.

”ಭಾರತದಂತಹ ಬಡ ದೇಶವು ಸಮೃದ್ಧ ರಾಷ್ಟ್ರವಾಗಲು ಉದಾರ ಬಂಡವಾಳಶಾಹಿಯೇ ಏಕೈಕ ಪರಿಹಾರ. ಮುಕ್ತ ಮಾರುಕಟ್ಟೆ ಮತ್ತು ಉದ್ಯಮಶೀಲತೆಯ ಅವಳಿ ಸ್ತಂಭಗಳನ್ನು ಆಧರಿಸಿದ ಉದಾರ ಬಂಡವಾಳಶಾಹಿ ಹೊಂದಿರುವ ಯಾವುದೇ ದೇಶ ತನ್ನ ಬಡತನದ ಸಮಸ್ಯೆಯನ್ನು ಪರಿಹರಿಸಬಹುದು. ಮತ್ತು ಇದು ಏಕೈಕ ಮಾರ್ಗ” ಎಂದು ಮೂರ್ತಿ ಹೇಳಿದರು. ಜಿಡಿಪಿ ಹೆಚ್ಚಿಸುವ ಕುರಿತು ಸರ್ಕಾರಕ್ಕೆ ನೀಡಿದ ಸಲಹೆಯ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, “ರಾಜಕೀಯ ನಾಯಕರು ಚೀನಾವನ್ನು ಬಹಳ ಎಚ್ಚರಿಕೆಯಿಂದ ಅಧ್ಯಯನ ಮಾಡಬೇಕು” ಎಂದು ಹೇಳಿದರು.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ