ಬೆಂಗಳೂರು: 2023-24ನೇ ಸಾಲಿನ ದ್ವಿತೀಯ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಜಾಲತಾಣದಲ್ಲಿ ಇಂದು ಪ್ರಕಟಿಸಲಾಗಿದೆ.
2024 ಮಾರ್ಚ್ 02ರಿಂದ ಮಾರ್ಚ್ 22ರವರೆಗೆ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ.
ಇನ್ನು ಮಾರ್ಚ್ 25 ರಿಂದ ಏಪ್ರಿಲ್ 06 ರವರೆಗೆ ಎಸ್‌ಎಸ್‌ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಮಂಡಲಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ.
ಮಂಡಲಿಯಿಂದ ಪ್ರಕಟಿಸಿರುವ ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ.
ಆಕ್ಷೇಪಣೆಯನ್ನು ಮಂಡಲಿಯ ಇಮೇಲ್ ವಿಳಾಸ: [email protected]ಕ್ಕೆ ಹಾಗೂ ಹಾರ್ಡ್ ಪ್ರತಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-560003 ಇಲ್ಲಿಗೆ ನಿಗದಿತ ಸಮಯದೊಳಗಾಗಿ ಕಳುಹಿಸುವುದು. ನಿಗದಿಪಡಿಸಿರುವ ಕೊನೆಯ ದಿನಾಂಕದ ನಂತರ ಬರುವ ಯಾವುದೇ ಆಕ್ಷೇಪಣೆಗಳನ್ನು ಪರಿಗಣಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Laxmi News 24×7