Breaking News

ರಿಸಲ್ಟ್​ ಬಳಿಕ ತೆಲಂಗಾಣ ಕಾಂಗ್ರೆಸ್​ ಶಾಸಕರು ಬೆಂಗ್ಳೂರಿಗೆ ಸ್ಥಳಾಂತರ ಸಾಧ್ಯತೆ! ಡಿಸಿಎಂ ಡಿಕೆಶಿ

Spread the love

ಹೈದರಾಬಾದ್: ತೆಲಂಗಾಣದಲ್ಲಿ ನಿನ್ನೆಯಷ್ಟೇ (ನ.30) ಮತದಾನ ಮುಕ್ತಾಯವಾಗಿದ್ದು, ಈ ಬಾರಿ ಕಾಂಗ್ರೆಸ್​ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಸುಳಿವನ್ನು ವಿವಿಧ ಮತಗಟ್ಟೆಗಳ ಸಮೀಕ್ಷೆ ತಿಳಿಸಿವೆ. ಆಡಳಿತಾರೂಢ ಬಿಆರ್​ಎಸ್​ ಮತ್ತು ಕಾಂಗ್ರೆಸ್​ ನಡುವೆ ಪ್ರಬಲ ಪೈಪೋಟಿ ಇದ್ದು, ಕುದುರೆ ವ್ಯಾಪಾರ ಸಂಭವವನ್ನು ತಡೆಗಟ್ಟಲು ಡಿ.3ರಂದು ಫಲಿತಾಂಶ ಪ್ರಕಟವಾಗುತ್ತಿದ್ದಂತೆ ತೆಲಂಗಾಣದ ಕಾಂಗ್ರೆಸ್​ ಶಾಸಕರನ್ನು ಬೆಂಗಳೂರಿಗೆ ಸ್ಥಳಾಂತರ ಮಾಡುವತ್ತ ಕಾಂಗ್ರೆಸ್​ ಹೈಕಮಾಂಡ್​ ಚಿಂತಿಸುತ್ತಿದೆ ಎಂದು ತಿಳಿದುಬಂದಿದೆ.

 

ತೆಲಂಗಾಣ ಕಾಂಗ್ರೆಸ್​ ಘಟಕದ ಮುಖ್ಯಸ್ಥ ರೇವಂತ್​ ರೆಡ್ಡಿ ಗೆಲುವಿನ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಚುನಾವಣಾ ಫಲಿತಾಂಶದ ಬಳಿಕ ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ನಡೆಯಬಹುದು. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಭಾನುವಾರದ ಮತ ಎಣಿಕೆಯ ನಂತರ ಶಾಸಕರನ್ನು ಸ್ಥಳಾಂತರಿಸುವ ಬಗ್ಗೆ ಕಾಂಗ್ರೆಸ್​ ಹೈಕಮಾಂಡ್ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಕಾಂಗ್ರೆಸ್‌ಗೆ 70ಕ್ಕಿಂತ ಕಡಿಮೆ ಸೀಟುಗಳು ಬಂದರೆ, ಶಾಸಕರನ್ನು ಬೆಂಗಳೂರು ಅಥವಾ ಬೇರೆಡೆಗೆ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಸ್ತಾಪವಿದೆ. ಬಹುಶಃ ಶಾಸಕರನ್ನು ಹೋಟೆಲ್ ಅಥವಾ ರೆಸಾರ್ಟ್‌ಗೆ ಸ್ಥಳಾಂತರ ಮಾಡಬಹುದು ಎಂದು ಕಾಂಗ್ರೆಸ್​ನ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ