Breaking News

ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಜನರು ಧರಣಿ

Spread the love

ಬೆಳಗಾವಿ : ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡು 43 ವರ್ಷ ಕಳೆದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ನ್ಯಾಯಕ್ಕೆ ಆಗ್ರಹಿಸಿ ಬೆಳಗಾವಿಯ ಡಿಸಿ ಕಚೇರಿ ಮುಂಭಾಗದಲ್ಲಿ ಸಂತ್ರಸ್ಥರು ಅನಿರ್ಧಿಷ್ಟಾವಧಿ ಧರಣಿಗೆ ಮುಂದಾಗಿದ್ದಾರೆ. ಹುಕ್ಕೇರಿ ತಾಲೂಕಿನ ಬೀರ‌ನಹಳ್ಳಿ, ಮನಗುತ್ತಿ, ಇಸ್ಲಾಂಪೂರ, ಗುಡಗನಟ್ಟಿ, ಹಳೇ ವಂಟಮೂರಿ ಸೇರಿ ಇನ್ನಿತರ ಗ್ರಾಮಗಳ ನೊಂದ ಜನರು ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ‍್ಯಾಲಿ ನಡೆಸಿದರು.

ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂದೆ ಧರಣಿ ಆರಂಭಿಸಿದರು. ಹಿಡಕಲ್ ಡ್ಯಾಂಗೆ ಹೊಲ, ಮನೆ ಕಳೆದುಕೊಂಡು ಭೀಕ್ಷೆ ಬೇಡುತ್ತಿದ್ದೇವೆ. ಭೂಮಿ ನೀಡದಿದ್ದರೆ ಸಾಯುವುದು ಖಚಿತ, ಜಮೀನು ಪರಿಹಾರ ನೀಡಿ ಇಲ್ಲದಿದ್ದರೆ ವಿಷ ನೀಡಿ ಸಾಯಿಸಿರಿ ಎಂಬ ಎಚ್ಚರಿಕೆ ಫಲಕಗಳನ್ನು ಪ್ರದರ್ಶಿಸಿ, ಹಲಗಿ ಬಾರಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ