Breaking News

ರಸ್ತೆ ಅಪಘಾತ ತಗ್ಗಿಸಲು ಸಮೂಹ ಮಾಧ್ಯಮ ಅಭಿಯಾನ: ಸಚಿವ ರಾಮಲಿಂಗಾರೆಡ್ಡಿ ಚಾಲನೆ

Spread the love

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಪ್ರಮಾಣ ತಗ್ಗಿಸಲು ಕರ್ನಾಟಕ ರಸ್ತೆ ಸುರಕ್ಷತಾ ಪ್ರಾಧಿಕಾರ ವಾಹನಗಳ ವೇಗವನ್ನು ಕಡಿಮೆ ಮಾಡಲು ಸಮೂಹ ಮಾಧ್ಯಮ ಅಭಿಯಾನ ಆರಂಭಿಸಿದ್ದು, ಸಾರಿಗೆ ಮತ್ತು ಪೊಲೀಸ್ ಇಲಾಖೆಯ ಜಂಟಿ ಅಭಿಯಾನಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು.

 

ಬಳಿಕ ಮಾತನಾಡಿದ ಅವರು, ವಾಹನ ಚಲಾಯಿಸುವವರು ತಮ್ಮ ಕುಟುಂಬದ ಹಿತಾಸಕ್ತಿಗಳನ್ನು ಗಮನದಲ್ಲಿರಿಸಿಕೊಂಡ ವಾಹನ ಚಲಾಯಿಸಿದಾಗ ಮಾತ್ರ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಸಾಧ್ಯ. ಏನೆಲ್ಲಾ ಜಾಗೃತಿ ಮೂಡಿಸಿದರೂ ಅಪಘಾತ ಪ್ರತಿವರ್ಷ ಕಡಿಮೆಯಾಗುತ್ತಿಲ್ಲ. ಕಳೆದ ವರ್ಷ 35,550 ರಸ್ತೆ ಅಪಘಾತಗಳಾಗಿವೆ. ಇದರಿಂದ 10,723 ಜನ ಸತ್ತಿದ್ದಾರೆ, 42,135 ಗಾಯಾಳುಗಳಾಗಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಅಪಘಾತ ಪ್ರಮಾಣ ಶೇ. 13 ಜಾಸ್ತಿ ಆಗಿದೆ. ಪ್ರತಿ ವರ್ಷ ಎಲ್ಲಾ ರಾಜ್ಯಗಳು ತಿಳಿವಳಿಕೆ ನೀಡಿದರೂ ರಸ್ತೆ ಅಪಘಾತಗಳ ಕಡಿಮೆಯಾಗುತ್ತಿಲ್ಲ ಎಂದು ಹೇಳಿದರು.

ಅತಿವೇಗದ ಚಾಲನೆ ಬದಲು ನಿಧಾನಕ್ಕೆ ವಾಹನಗಳ ಸಂಚಾರ ಮಾಡಬೇಕು: ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಜಾಗೃತಿ ಮೂಡಿಸುತ್ತಿದ್ದರೂ, ವಾಹನ ಚಲಾಯಿಸುವವರಿಗೆ ಈ ಬಗ್ಗೆ ಜಾಗೃತಿ ಇರಬೇಕು. ದೂರವಾಣಿ ಕರೆ ಮಾಡುತ್ತಾ ವಾಹನ ಚಾಲನೆ, ಹೆಲ್ಮೆಟ್ ರಹಿತ ಚಾಲನೆ, ವ್ಹೀಲಿಂಗ್ ಮಾಡಿ ಅಪಘಾತಕ್ಕೀಡಾಗಿ ಅನಾಹುತ ಮಾಡಿಕೊಳ್ಳುತ್ತಾರೆ. ದ್ವಿಚಕ್ರ ವಾಹನ ಅಪಘಾತದಲ್ಲಿ ತಲೆಗೆ ಪೆಟ್ಟುಬಿದ್ದು ಅನಾಹುತ ಆಗುತ್ತಿದೆ. ಇದಕ್ಕೆಲ್ಲ ಚಾಲಕರು ಹೆಚ್ಚು ಜವಾಬ್ದಾರಿ ವಹಿಸಬೇಕು. ಅತಿವೇಗದ ಚಾಲನೆ ಬದಲು ನಿಧಾನಕ್ಕೆ ವಾಹನಗಳ ಸಂಚಾರ ಮಾಡಬೇಕು ಎಂದು ಸಲಹೆ ನೀಡಿದರು.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ