Breaking News
Home / ಜಿಲ್ಲೆ / ಹಾಸನ / ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ:ರೇವಣ್ಣ ಕಿಡಿ

ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ:ರೇವಣ್ಣ ಕಿಡಿ

Spread the love

ಹಾಸನ: ಒಂದು ವೋಟಿಗೆ ಐದು ಸಾವಿರ, ಮೂರು ಸಾವಿರ ಎಂದು ಹಂಚಿದ ಮೇಲೆ ಚುನಾವಣೆ ಯಾಕೆ ಮಾಡಬೇಕು ಎಂದು ಮಾಜಿ ಸಚಿವ ರೇವಣ್ಣ ಕಿಡಿಕಾರಿದ್ದಾರೆ.

ಹಾಸನದಲ್ಲಿ ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆ ಬಗ್ಗೆ ಮಾತನಾಡಿದ ಅವರು, ಸರ್ಕಾರದ ಹಿಡಿತಕ್ಕೆ ಸಿಲುಕಿ ಚುನಾವಣಾ ಆಯೋಗ ನಲುಗುತ್ತಿದೆ. ಶಿರಾ ಕ್ಷೇತ್ರದ ಒಂದು ಊರಿನಲ್ಲಿ ಬಿಜೆಪಿ ಅಭ್ಯರ್ಥಿಯನ್ನೇ ಊರೊಳಗಡೆ ಬಿಟ್ಟಿಲ್ಲ. ಆದರೂ ಆ ಊರಿನಲ್ಲಿ ಶೇ, 80ರಷ್ಟು ಮತಗಳು ಲೀಡ್ ಇದೆ ಅಂತಾ ಹೇಳುತ್ತಾರೆ. ಆಡಳಿತ ಯಂತ್ರವನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಎಂದರು.

ಚುನಾವಣೆಗೂ ಮೊದಲೇ 20 ಸಾವಿರ ಮತದಿಂದ ಗೆಲ್ಲುತ್ತೇವೆ ಎಂದು ಹೇಳುತ್ತಾರೆ. ಚುನಾವಣಾ ಆಯೋಗ ರಾಜ್ಯದಲ್ಲಿ ಒಂದು ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಸರ್ಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಸಿಎಂ ಮತ್ತು ಸಿಎಂ ಮಗ ಇಬ್ಬರೂ ಎರಡು ಕ್ಷೇತ್ರದಲ್ಲಿ 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ ಅಂತಾ ಹೇಳುತ್ತಾರೆ. ಈ 25 ಸಾವಿರ ಮತ ಪಡೆಯೋಕೆ ಎಷ್ಟು ಹಣ ಖರ್ಚು ಮಾಡಿದ್ದಾರೆ ಅಂತಾ ಹೇಳಬೇಕು ಎಂದು ಅಗ್ರಹಿಸಿದರು.

ಜೊತೆಗೆ ಬಿಜೆಪಿಯವರು ಗುಪ್ತಚರ ಇಲಾಖೆಯನ್ನು ಏನು ಚುನಾವಣೆ ಸಮೀಕ್ಷೆ ಮಾಡೋಕೆ ಬಿಟ್ಟಿದ್ದೀರಾ ಎಂದು ರೇವಣ್ಣ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ