ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ನಂತ್ರ, ಪರೀಕ್ಷೆಯನ್ನು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ರದ್ದುಪಡಿಸಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರವು ಡಿ.23ರಂದು ಮರು ಪರೀಕ್ಷೆ ನಡೆಸೋದಕ್ಕೆ ದಿನಾಂಕ ನಿಗದಿ ಪಡಿಸಿದೆ. ಇಂತಹ ಮರು ನಿಗದಿ ಪರೀಕ್ಷೆಯನ್ನು ಮುಂದೂಡುವಂತೆ ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಗೆ ಪತ್ರ ಬರೆದು ಶಾಸಕರು ಆಗ್ರಹಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿ ಸೇರಿದಂತೆ ಹಲವರಿಗೆ ಶಾಸಕರಾದಂತ ಎಸ್ ಶರಣಗೌಡ ಪಾಟೀಲ್, ಬಸನಗೌಡ ತುರುವಿಹಾಳ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಡಿ.23ರಂದು 545 ಪಿಎಸ್‌ಐ ನೇಮಕಾತಿಗಾಗಿ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಹೀಗೆ ನಿಗದಿ ಪಡಿಸಿರುವಂತ ಪರೀಕ್ಷೆಗೆ ತಯಾರಿ ಆಗೋದಕ್ಕೆ ಕೇವಲ 20 ದಿನಗಳಿದೆ. ತುಂಬಾ ಕಡಿಮೆ ಅವಧಿಯಲ್ಲಿ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇವಲ 20 ದಿನಗಳಲ್ಲಿ ಓದಿ ಪಿಎಸ್‌ಐ ಪರೀಕ್ಷೆ ಎದುರಿಸೋದು ಅಭ್ಯರ್ಥಿಗಳಿಗೆ ಕಷ್ಟವಾಗಲಿದೆ. ಕನಿಷ್ಠ ಮೂರು ತಿಂಗಳು ಪರೀಕ್ಷೆ ಮುಂದೂಡುವಂತೆ ಶಾಸಕರು ಸಿಎಂ ಸಿದ್ಧರಾಮಯ್ಯ, ರಾಹುಲ್ ಗಾಂಧಿ, ಪ್ರಿಯಾಂಕ್ ಗಾಂಧಿಯಲ್ಲಿ ಮನವಿ ಮಾಡಿದ್ದಾರೆ.
ಅಂದಹಾಗೇ ಡಿ.23ರಂದು 545 ಪಿಎಸ್‌ಐ ನೇಮಕಾತಿಗೆ ಮರು ಪರೀಕ್ಷೆ ನಿಗದಿ ಪಡಿಸಲಾಗಿದೆ. ಬೆಂಗಳೂರು ಕೇಂದ್ರದಲ್ಲಿ ಮಾತ್ರವೇ ಈ ಬಾರಿ ಪಿಎಸ್‌ಐ ಮರು ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿ ಆದೇಶಿಸಿತ್ತು.