Breaking News

ಹೊಸ ‘BPL, APL ಕಾರ್ಡ್’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ನಾಳೆ ‘ಅರ್ಜಿ ಸಲ್ಲಿಕೆ’ಗೆ ಅವಕಾಶ |

Spread the love

ಬೆಂಗಳೂರು: ಹೊಸ ರೇಷನ್ ಕಾರ್ಡ್ ಗೆ ( Ration Card ) ಅರ್ಜಿ ಸಲ್ಲಿಸೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಡಿ.3ರಂದು ಅರ್ಜಿ ಸಲ್ಲಿಕೆಗೆ ಆಹಾರ ಇಲಾಖೆ ಅವಕಾಶ ನೀಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಆಹಾರ ಇಲಾಖೆಯು, ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಹೇಳಿದೆ.

 

ರೇಷನ್ ಕಾರ್ಡ್ ತಿದ್ದುಪಡಿಗಾಗಿ ನ.29ರ ಹಾಗೂ ನವೆಂಬರ್.30ರವರೆಗೆ ಎರಡು ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗಿತ್ರು.

ಇನ್ನೂ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು. 6 ವರ್ಷದ ಒಳಗಿನ ಮಕ್ಕಳಿದ್ದರೇ ಜನನ ಪ್ರಮಾಣಪತ್ರವನ್ನು ಹೆಸರು ಸೇರ್ಪಡೆಗೆ ಬೇಕು. 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ ಪ್ರಮಾಣಪತ್ರ ಅದು ಐದು ವರ್ಷಕ್ಕಿಂತ ಒಳಗೆ ಇರುವಂತ ದಾಖಲೆಗಳನ್ನು ನೀಡಬೇಕು ಎಂದಿದೆ.

ಹೊಸ BPL, APL ಕಾರ್ಡ್ ಗಳಿಗಾಗಿ ಡಿ.3ರಂದು ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಸೇವಾ ಕೇಂದ್ರಗಳಿಗೆ ತೆರಳಿ ಸಲ್ಲಿಸಬಹುದಾಗಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

2026ರ ಮೊದಲ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ಹೋಳಿ ಹಬ್ಬದಂದೇ ಯಾರಿಗೆ ಅದೃಷ್ಟ? ಯಾರಿಗೆ ಎಚ್ಚರಿಕೆ?

Spread the love2026ರ ವರ್ಷವು ಆಧ್ಯಾತ್ಮಿಕವಾಗಿ ಸಂಚಲನ ಮೂಡಿಸಲು ಸಜ್ಜಾಗಿದೆ. ಈ ಬಾರಿ ಬಣ್ಣಗಳ ಹಬ್ಬ ಹೋಳಿಯ ಸಂಭ್ರಮದ ನಡುವೆಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ