Breaking News
Home / ಜಿಲ್ಲೆ / ಬೆಂಗಳೂರು / ಬಡವರನ್ನು ಹಸಿವಿನಲ್ಲೆ ಮಲಗಿಸಿದ್ದೇ ಬಿಜೆಪಿ ಸರ್ಕಾರ:ಆಮ್ ಆದ್ಮಿ ಪಕ್ಷ

ಬಡವರನ್ನು ಹಸಿವಿನಲ್ಲೆ ಮಲಗಿಸಿದ್ದೇ ಬಿಜೆಪಿ ಸರ್ಕಾರ:ಆಮ್ ಆದ್ಮಿ ಪಕ್ಷ

Spread the love

ಬೆಂಗಳೂರು: ಸಮ್ಮಿಶ್ರ ಸರ್ಕಾರವನ್ನು ಬೀಳಿಸಿ ಅಧಿಕಾರಕ್ಕೆ ಬಂದ ದಿನದಿಂದ ಇಂದಿರಾ ಕ್ಯಾಂಟೀನ್ ಮುಚ್ಚಲು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹವಣಿಸುತ್ತಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇದಕ್ಕೆ ಕುಮ್ಮಕ್ಕು ನೀಡುತ್ತಿದ್ದು ಬಡವರ ಪಾಲಿನ ಅನ್ನ ಕಸಿಯುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಾದ್ಯಂತ ಇರುವ 174 ಕ್ಯಾಂಟೀನ್ ಹಾಗೂ 15 ಮೊಬೈಲ್ ಕ್ಯಾಂಟೀನ್‌ಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸದೆ, ಗುತ್ತಿಗೆದಾರರಿಗೆ ಹಣ ಪಾವತಿ ಮಾಡದೆ ನಿರ್ಲಕ್ಷ್ಯದಿಂದ ನೋಡಲಾಗುತ್ತಿದೆ ಎಂದರು.

ಲಾಕ್‌ಡೌನ್ ಸಂದರ್ಭದಲ್ಲಿ ಬಡವರಿಗೆ, ವಲಸೆ ಕಾರ್ಮಿಕರಿಗೆ ಊಟ ನೀಡಿ ಎಂದು ಆಮ್ ಆದ್ಮಿ ಪಕ್ಷ ಎಷ್ಟೇ ಒತ್ತಾಯಿಸಿದರೂ, ಉಚಿತವಾಗಿ ಊಟ ನೀಡಲಿಲ್ಲ. ದೆಹಲಿಯಲ್ಲಿ ಇಷ್ಟು ಸುಸಜ್ಜಿತವಾದ ವ್ಯವಸ್ಥೆ ಇಲ್ಲದಿದ್ದರೂ ಪ್ರತಿದಿನ 13 ಲಕ್ಷ ಜನರಿಗೆ ಊಟ ನೀಡಲಾಗುತ್ತಿತ್ತು. ಆದರೆ ನಮ್ಮ ರಾಜ್ಯದಲ್ಲಿ ವ್ಯವಸ್ಥಿತವಾಗಿ ಇರುವ ಯೋಜನೆಯನ್ನು ಉಪಯೋಗಿಸಿಕೊಳ್ಳದೆ ಬಡವರನ್ನು ಹಸಿವಿನಲ್ಲೆ ಮಲಗಿಸಿದ್ದೇ ಬಿಜೆಪಿ ಸರ್ಕಾರದ ಸಾಧನೆ, ಮುಖ್ಯಮಂತ್ರಿಗಳಿಗೆ, ಸಚಿವ ಸುರೇಶ್ ಕುಮಾರ್ ಅವರಿಗೆ ನಾಚಿಕೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ