Breaking News

ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು. ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ

Spread the love

ಶಿರಸಿ(ಉತ್ತರ ಕನ್ನಡ): ರಾಜ್ಯದಲ್ಲಿ ದಲಿತ ಸಿಎಂ ಆಗಲೂ ಇನ್ನೂ ಕಾಲ ಕೂಡಿ ಬಂದಿಲ್ಲ, ಕಾಲ ಕೂಡಿ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಕಾರ್ಯಕ್ರಮವೊಂದರ ನಿಮಿತ್ತ ಶಿರಸಿಗೆ ಶನಿವಾರ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಲಿತ ಸಿಎಂ ಮಾಡುವಂತೆ ನಾವು ಒತ್ತಾಯ ಮಾಡಬಹುದು, ಆದರೆ ನಿರ್ಧಾರವನ್ನು ಪಕ್ಷ ತೆಗೆದುಕೊಳ್ಳುತ್ತದೆ. ಸದ್ಯಕ್ಕೆ ದಲಿತ ಸಿಎಂ ವಿಚಾರ ಇಲ್ಲ ಎಂದರು.

ಪಕ್ಷದ ಮುಖಂಡ ಬಿ ಕೆ ಹರಿಪ್ರಸಾದ್ ಅವರನ್ನು ಪಕ್ಷ ಕಡೆಗಣನೆ ಮಾಡಿದೆಯೇ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಹಿರಿಯರಿದ್ದಾರೆ ಅವರನ್ನು ಯಾರು ಕೆಳಗಿಳಿಸಲು ಆಗೋಲ್ಲ. ರಾಷ್ಟ್ರ ರಾಜಕಾರಣದಲ್ಲಿ ಸುಮಾರು 30 ವರ್ಷ ರಾಜಕೀಯ ಮಾಡಿದ್ದಾರೆ. ಅವರನ್ನು ಕಡೆಗಣಿಸಲು ಆಗೋಲ್ಲ, ಆ ರೀತಿಯ ವಾತಾವರಣ ನಮ್ಮ ಪಕ್ಷದಲ್ಲಿ ಇಲ್ಲ. ನಾವು ಅವರನ್ನು ಭೇಟಿ ಮಾಡಿ ಮಾತಕತೆ ನಡೆಸಿದ್ದೇವೆ. ಸಚಿವ ಸ್ಥಾನ ಅವರಿಗಷ್ಟೇ ಅಲ್ಲ, ಹಲವು ಹಿರಿಯ ನಾಯಕರಿಗೆ ನೀಡಿಲ್ಲ. ಅವಕಾಶ ಬಂದಾಗ ಎಲ್ಲರಿಗೂ ಸಚಿವ ಸ್ಥಾನ ಕೊಡುತ್ತಾರೆ ಎಂದು ಹೇಳೀದರು.

ಸದ್ಯ 25 ಮಂದಿ ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಡುತ್ತಿದ್ದಾರೆ. ಲೋಕಸಭೆ ಚುನಾವಣೆ ಮುಗಿದ ನಂತರ ಇನ್ನೂ ಅವಕಾಶ ಇದೆ. ಮುಂದೆ ಎಲ್ಲರಿಗೂ ಕೊಡುತ್ತಾರೆ. ಯಾರು ಅಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಎಂದರು. ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿ, ಹೆಚ್ಚು ರಾಜ್ಯಗಳಲ್ಲಿ ಕಾಂಗ್ರೆಸ್​ ಗೆಲ್ಲುತ್ತದೆ ಎಂಬ ಆಶಾಭಾವನೆ ಇದೆ. 24 ಗಂಟೆಗಳ ಕಾಲ ಕಾಯೋಣ ಎಂದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ