Breaking News
Home / ರಾಜ್ಯ / ನಾಳೆ ಬೈಲೆಕ್ಷನ್ ರಿಸಲ್ಟ್ :ಗೆಲ್ಲೋರು ಯಾರು..?ಅಭ್ಯರ್ಥಿ ಗಳ ಎದೆಯಲ್ಲಿ ನಡುಕ ಶುರು

ನಾಳೆ ಬೈಲೆಕ್ಷನ್ ರಿಸಲ್ಟ್ :ಗೆಲ್ಲೋರು ಯಾರು..?ಅಭ್ಯರ್ಥಿ ಗಳ ಎದೆಯಲ್ಲಿ ನಡುಕ ಶುರು

Spread the love

ತುಮಕೂರು, ನ.9- ಶಿರಾ ಉಪ ಚುನಾವಣೆಯ ಮತ ಎಣಿಕೆ ನಾಳೆ ಬೆಳಗ್ಗೆ 8 ಗಂಟೆಗೆ ತುಮಕೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೆಡೆಯಲಿದ್ದು ಜಿಲ್ಲಾ ಚುನಾವಣಾಧಿಕಾರಿಗಳು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ಫಲಿತಾಂಶ ಬಹುತೇಕ 11ರಿಂದ 12 ಗಂಟೆಯೊಳಗೆ ಪ್ರಕಟವಾಗುವ ಸಾಧ್ಯತೆ ಇದೆ. ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತಮುತ್ತ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯಾದ ಕೋನಾ ವಂಶಿಕೃಷ್ಣ ಅವರ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನಾಳೆ ಶಿರಾ ಕೋಟೆಯ ಮೇಲೆ ಯಾರು ಬಾವುಟ ಹಾರಿಸುತ್ತಾರೆ. ಯಾರು ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸುತ್ತಾರೆ ಎಂಬ ಕುತೂಹಲದಿಂದ ಶಿರಾ ತಾಲೂಕಿನ ಜನತೆ ಎದುರು ನೋಡುತ್ತಿz್ದÁರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ನನ್ನ ಭವಿಷ್ಯ ಏನಾಗುತ್ತದೆಯೋ. ಶಿರಾ ತಾಲೂಕಿನಲ್ಲಿ ಅಭಿವೃದ್ಧಿಯೇ ನನ್ನ ಮೂಲ ಗುರಿ ಎಂದು ಜಪಿಸುತ್ತಿದ್ದ ಅವರಿಗೆ ಆಡಳಿತ ಬಿಜೆಪಿ ಚುನಾವಣೆಯಲ್ಲಿ ದೊಡ್ಡ ಟಾಂಗ್ ನೀಡಿತು. ನೂತನವಾಗಿ ಕೆಪಿಸಿಸಿ ಸಾರಥ್ಯವನ್ನು ವಹಿಸಿರುವ ಡಿ.ಕೆ.ಶಿವಕುಮಾರ್ ಅವರಿಗೆ ಇದು ಮೊದಲ ಚುನಾವಣೆಯಾಗಿದೆ.

ಇದರಲ್ಲಿ ಗೆದ್ದು ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ ಎಂಬ ಸಂದೇಶವನ್ನು ಸಾರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ.ಅದರ ಹಿನ್ನಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ಕ್ಷೇತ್ರದ ಶಾಸಕರಾಗಿರುವ ಡಾ.ಜಿ.ಪರಮೇಶ್ವರ್, ಮಧು ಗಿರಿಯ ಮಾಜಿ ಶಾಸಕರಾದ ರಾಜಣ್ಣ ಸೇರಿದಂತೆ ಹಲವಾರು ಘಟಾನುಘಟಿಗಳು ಶಿರಾ ಕ್ಷೇತ್ರದತ್ತ ಮುಖ ಮಾಡಿದ್ದರು. ಜಯಚಂದ್ರ ಅವರು ಗೆಲ್ಲಲೇಬೇಕೆಂದು ಹಗಲಿರುಳು ಶ್ರಮಿಸಿದ್ದರು.

ಇನ್ನು ಶಾಸಕರಾಗಿದ್ದ ಡಿ.ಸತ್ಯನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ನಡೆದ ಈ ಉಪ ಚುನಾವಣೆಯಲ್ಲಿ ಅವರ ಪತ್ನಿಯೇ ಅಮ್ಮಾಜಮ್ಮ ಅವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ರಾಜೇಶ್ ಗೌಡ ಅವರು ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಪ್ರಾದೇಶಿಕ ಪಕ್ಷವಾದ ಜÁತ್ಯತೀತ ಜನತಾದಳ ಕ್ಕೆ ಈ ಚುನಾವಣೆ ಪ್ರತಿಷ್ಠೆಯಾಗಿ ಪರಿಣಮಿಸಿದೆ.

ಏನಾದರೂ ಮಾಡಿ ಗೆಲ್ಲಲೇಬೇಕು ಈ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ಪಕ್ಷದ ವಶಕ್ಕೆ ತೆಗೆದುಕೊಳ್ಳಬೇಕೆಂದು ಪಕ್ಷದ ವರಿಷ್ಠರಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿಗಳು ಶಿರಾಕ್ಕೆ ಆಗಮಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಟಿ.ಬಿ.ಜಯಚಂದ್ರ ಅವರನ್ನ ಬೆಂಬಲಿಸಿದರು. ಇನ್ನು ಆಡಳಿತ ಪಕ್ಷವಾದ ಬಿಜೆಪಿಯ ಅರ್ಧ ಸಚಿವರುಗಳ ದಂಡೆ ಶಿರಾ ನಗರಕ್ಕೆ ಆಗಮಿಸಿ ಬೀಡು ಬಿಟ್ಟಿದ್ದರು. ಶಿರಾ ಉಪಚುನಾವಣೆಯಲ್ಲಿ ಏನಾದರೂ ಸೋತರೆ ಸರ್ಕಾರಕ್ಕೆ ಮುಖಭಂಗ ವಾಗಲಿದೆ ಎಂಬ ಹಿನ್ನೆಲೆಯಲ್ಲಿ ಸ್ವತಹಾ ಮುಖ್ಯಮಂತ್ರಿಗಳು ಹಾಗೂ ಅವರ ಪುತ್ರ ಸೇರಿದಂತೆ ಹಲವಾರು ಸಚಿವರು ಇಲ್ಲಿಯೇ ಬೀಡು ಬಿಟ್ಟಿದ್ದರು.

ಕಳೆದ ಎರಡು ತಿಂಗಳಿನಿಂದ ಬಿಜೆಪಿಯ ವರಿಷ್ಠರು, ಮುಖಂಡರು, ಕಾರ್ಯಕರ್ತರು ಎರಡು ಲಕ್ಷದ ಹದಿನೈದು ಸಾವಿರ ಮತದಾರರನ್ನು ಭೇಟಿ ಮಾಡಿ ಮತ ಯಾಚಿಸಿದ್ದರು.ಇನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಅವರ ಪರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಮತ ಯಾಚಿಸಿದರು. ಶಿರಾ ಕ್ಷೇತ್ರದ ಮತದಾರರು ಅನುಕಂಪದ ಅಲೆಯಲ್ಲಿ ಮತ ನೀಡುತ್ತಾರೆ ಎಂಬ ವಿಶ್ವಾಸದೊಂದಿಗೆ ಗೆಲುವಿನ ಉತ್ಸಾಹದಲ್ಲಿ ಬೀಗುತ್ತಿದ್ದಾರೆ.

ಒಟ್ಟಾರೆ ವಿಜಯಮಾಲೆ ಈ ಮೂವರಲ್ಲಿ ಯಾರ ಕೊರಳಿಗೆ ಬೀಳಲಿದೆಯೋ ನಾಳೆಯ ಫಲಿತಾಂಶದವರೆಗೆ ಕಾಯಲೇಬೇಕಿದೆ. ಅಭ್ಯರ್ಥಿಗಳಲ್ಲಿ ಆತಂಕ ಮನೆ ಮಾಡಿದ್ದರೆ ಇತ್ತ ಭಾರೀ ಬೆಟ್ಟಿಂಗ್ ಕಟ್ಟಿರುವವರು ಕೂಡಾ ಫಲಿತಾಂಶವನ್ನು ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ.

ಮತಗಳನ್ನು ಮೂರು ಪಕ್ಷಗಳ ಅಭ್ಯರ್ಥಿಗಳು ಪಡೆಯುವ ಸಾಧ್ಯತೆ ಇದೆ ಎಂದು ಬೂತ್ ಮಟ್ಟದಲ್ಲಿ ಮತದಾರರು ಚಲಾಯಿಸಿರುವ ಅಂಕಿ ಅಂಶಗಳ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ಬಿ.ಜಯಚಂದ್ರ, ಜೆಡಿಎಸ್ ಪಕ್ಷದ ಅಭ್ಯರ್ಥಿ ಅಮ್ಮಾಜಮ್ಮ ಹಾಗೂ ಬಿಜೆಪಿ ಪಕ್ಷದ ಅಭ್ಯರ್ಥಿ ರಾಜೇಶ್ ಗೌಡ ಅವರು ಜÁತಿವಾರು ಮತಗಳನ್ನು ಪಡೆದಿದ್ದಾರೆ.

ಅಡಳಿತ ಪಕ್ಷದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಅವರ ನಡುವೆ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರ ನಡುವೆ ತೀವ್ರ ಪೈಪೋಟಿ ನಡೆದು ಕೊನೆ ಘಳಿಗೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ಅಂದಾಜಿಸಲಾಗಿದೆ. ಒಟ್ಟಾರೆ ನಾಳೆ ಬೆಳಿಗ್ಗೆ ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗಿದೆ ಅಭ್ಯರ್ಥಿ ಗಳ ಎದೆಯಲ್ಲಿ ನಡುಕ ಶುರುವಾಗಿದೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ